ಶಿವಮೊಗ್ಗ ನಗರ ಹೇಗಿದೆ, ಸರ್ಕಾರಿ ನೌಕರರು ಅಭಿಪ್ರಾಯ ದಾಖಲಿಸಿ

ಶಿವಮೊಗ್ಗ ನಗರ ಹೇಗಿದೆ, ಸರ್ಕಾರಿ ನೌಕರರು ಅಭಿಪ್ರಾಯ ದಾಖಲಿಸಿ

ಶಿವಮೊಗ್ಗ | 21 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ನಾಗರೀಕ ಸೌಲಭ್ಯಗಳ ಮಾಹಿತಿ ದಾಖಲೀಕರಣ ನಡೆಯುತ್ತಿದ್ದು, ಎಲ್ಲ ವರ್ಗದ ಜನರು ಪಾಲ್ಗೊಳ್ಳುತ್ತಿದ್ದಾರೆ. ನಗರ ವ್ಯಾಪ್ತಿಯಲ್ಲಿ ಇರುವ ಎಲ್ಲ ಸರ್ಕಾರಿ ನೌಕರರು ಪಾಲ್ಗೊಳ್ಳಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಶಿವಮೊಗ್ಗ ನಗರದ ನಾಗರಿಕ ಅಭಿಪ್ರಾಯ ಸಂಗ್ರಹಣೆಯ ಸಮೀಕ್ಷೆಯಲ್ಲಿ ಭಾಗವಹಿಸಿ‌ ಮಾತನಾಡಿ, ವಿವಿಧ ಶೀರ್ಷಿಕೆ, ವಿವಿಧ ಇಲಾಖೆಗಳಡಿ ಇರುವ ಸೌಲಭ್ಯಗಳ ಪ್ರಗತಿ ಮೌಲ್ಯಮಾಪನ ಮಾಡಿ ಮುಖ್ಯ ನಗರಗಳ ಅಭಿವೃದ್ಧಿ ಸೂಚ್ಯಂಕವನ್ನು ಸಿದ್ಧಪಡಿಸಲಾಗುತ್ತಿದೆ. ನೌಕರರು ವೈಯಕ್ತಿಕವಾಗಿಯು‌ ಅಭಿಪ್ರಾಯ ದಾಖಲಿಸಬೇಕು ಎಂದು ತಿಳಿಸಿದರು.

“ಸಾರ್ವಜನಿಕ ಭಾಗವಹಿಸುವಿಕೆ ಸಮೀಕ್ಷೆ” ಮೂಲಕ ಶಿವಮೊಗ್ಗ ನಗರದ ನಾಗರೀಕರು ತಮ್ಮ ನಗರದಲ್ಲಿ ಲಭ್ಯ ಸೌಲಭ್ಯಗಳ ಬಗ್ಗೆ ದಾಖಲಿಸಲು ಅವಕಾಶ ಮಾಡಲಾಗಿದೆ. ಇದರಿಂದ “ಸಾರ್ವಜನಿಕ ಭಾಗವಹಿಸುವಿಕೆ ಸಮೀಕ್ಷೆ” ಜೀವನ ಗುಣಮಟ್ಟ ಸೌಕರ್ಯ ಕುರಿತು ಮಾಹಿತಿ ಸಂಗ್ರಹಣ ತಯಾರಿಸುವಾಗ ಶೇಕಡ 30 ಅಂಕಗಳು ಲಭ್ಯವಾಗುತ್ತದೆ ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಸ್ಮಾರ್ಟ್ ಸಿಟಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಬ್ರಿಜೀಟ್ ವರ್ಗೀಸ್, ಸಮನ್ವಯ ಕಾಶಿ, ಸಮನ್ವಯ ಟ್ರಸ್ಟ್ ಸ್ವಯಂ ಸೇವಕರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

|| ಇದನ್ನೂ ಓದಿ || ಶಿವಮೊಗ್ಗ ನಗರ ಹೇಗಿದೆ ?, ಸಾರ್ವಜನಿಕ ಭಾಗವಹಿಸುವಿಕೆ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಳ್ಳಿ, ನಿಮ್ಮ ಅಭಿಪ್ರಾಯ ದಾಖಲಿಸಿ https://digimalenadu.com/2022/12/shivamogga-city-public-opinion-survey/

digimalenadu

ಶಿವಮೊಗ್ಗ
error: Content is protected !!