ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಉನ್ನತ ಶಿಕ್ಷಣ ನೋಂದಣಿ ಪ್ರಮಾಣ ಹೆಚ್ಚಿಸುವ ಗುರಿ

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಉನ್ನತ ಶಿಕ್ಷಣ ನೋಂದಣಿ ಪ್ರಮಾಣ ಹೆಚ್ಚಿಸುವ ಗುರಿ

ಶಿವಮೊಗ್ಗ | 23 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳಿಗೆ ಬಹುಶಿಸ್ತೀಯ ವಿಷಯಗಳನ್ನು ಆಯ್ಕೆಮಾಡಿಕೊಂಡು ಅಧ್ಯಯನಿಸಲು ಅವಕಾಶ ನೀಡುವುದರಿಂದ ಶಿಕ್ಷಣದ ಗುಣಮಟ್ಟ ಮತ್ತು ವಿದ್ಯಾರ್ಥಿಗಳ ಜ್ಞಾನಮಟ್ಟ ವೃದ್ಧಿಯಾಗಲಿದೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

‌ಕುವೆಂಪು ವಿವಿ ಜ್ಞಾನಸಹ್ಯಾದ್ರಿ ಆವರಣದಲ್ಲಿರುವ ವಿಶ್ವವಿದ್ಯಾಲಯ ಕಲಾ ಮತ್ತು ವಾಣಿಜ್ಯ ಕಾಲೇಜಿನ 2022-23ನೇ ಸಾಲಿನ ವಿದ್ಯಾರ್ಥಿ ಸಾಂಸ್ಕೃತಿಕ ವೇದಿಕೆ, ರಾಷ್ಟ್ರೀಯಯ ಸೇವಾ ಯೋಜನೆ, ಯುವ ರೆಡ್‌ಕ್ರಾಸ್ ಘಟಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆಯನ್ನು ವಿವಿಯ ಬಸವ ಸಭಾಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೆರವೇರಿಸಿ ಮಾತನಾಡಿದರು.

ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಜೊತೆಗೆ ಪ್ರಸ್ತುತ ಇರುವ ಉನ್ನತ ಶಿಕ್ಷಣದ ನೊಂದಣಿ ಪ್ರಮಾಣವನ್ನು ಹೆಚ್ಚಿಸುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಬಹುಶಿಸ್ತೀಯ ಅಧ್ಯಯನದತ್ತ ಮುಖಮಾಡಿ ಹೆಚ್ಚು ಜ್ಞಾನಗಳಿಸುವ ಅವಕಾಶ ಸದುಪಯೋಗಪಡಿಸಿಕೊಂಡು ಉತ್ತಮ ಜ್ಞಾನಕೌಶಲ್ಯಗಳೊಂದಿಗೆ ದೇಶದ ಬೆಳವಣಿಗೆಗೆ ತಮ್ಮ ಕೊಡುಗೆ ನೀಡಬೇಕು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವಿಶ್ವವಿದ್ಯಾಲಯ ಆವರಣದಲ್ಲಿರುವ ವಿಶ್ವವಿದ್ಯಾಲಯ ಕಲಾ ಮತ್ತು ವಾಣಿಜ್ಯ ಕಾಲೇಜನ್ನು ವಿವಿಯ ಘಟಕ ಕಾಲೇಜಾಗಿ ಪರಿಗಣಿಸಲು ನಿರ್ಧರಿಸಲಾಗಿದೆ. ಸದ್ಯದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದರು. ವಿವಿಯ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರಾಜ ಪರಿಸರ, ಕಾಲೇಜಿನ ಪ್ರಾಚಾರ್ಯ ಡಾ. ಎಚ್. ಎಂ. ಧರ್ಮೇಗೌಡ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

|| ಇದನ್ನೂ ಓದಿ || ಶಿವಮೊಗ್ಗ ನಗರ ಹೇಗಿದೆ ?, ಸಾರ್ವಜನಿಕ ಭಾಗವಹಿಸುವಿಕೆ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಳ್ಳಿ, ನಿಮ್ಮ ಅಭಿಪ್ರಾಯ ದಾಖಲಿಸಿ https://digimalenadu.com/2022/12/shivamogga-city-public-opinion-survey/

digimalenadu

ಶಿವಮೊಗ್ಗ
error: Content is protected !!