ಐಎಂಎ ವೈದ್ಯರ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ, ಭಾರತೀಯ ವೈದ್ಯಕೀಯ ಸಂಘದ ರಾಜ್ಯಮಟ್ಟದ ಸ್ಪರ್ಧೆ

ಐಎಂಎ ವೈದ್ಯರ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ, ಭಾರತೀಯ ವೈದ್ಯಕೀಯ ಸಂಘದ ರಾಜ್ಯಮಟ್ಟದ ಸ್ಪರ್ಧೆ

ಶಿವಮೊಗ್ಗ | 24 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ

ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡಾಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಪ್ರತಿಯೊಬ್ಬರು ಆಸಕ್ತ ಸ್ಪರ್ಧೆಗಳಲ್ಲಿ ಅಭ್ಯಾಸ ಮಾಡಬೇಕು. ನಿರಂತರವಾಗಿ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದರಿಂದ ಆರೋಗ್ಯ ಚೆನ್ನಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌‌ ಕುಮಾರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಐಎಂಎ ಕ್ರಿಕೆಟ್‌ ಅಸೋಸಿಯೆಷನ್‌ ಶಿವಮೊಗ್ಗ ವತಿಯಿಂದ ಶಿವಮೊಗ್ಗ ನಗರದ ಪೆಸಿಟ್‌ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ “ಭಾರತೀಯ ವೈದ್ಯಕೀಯ ಸಂಘ ಕರ್ನಾಟಕ ರಾಜ್ಯ ಶಾಖೆಯ ರಾಜ್ಯ ಮಟ್ಟದ ವೈದ್ಯರ ಕ್ರಿಕೆಟ್‌ ಪಂದ್ಯಾವಳಿ” ಉದ್ಘಾಟಿಸಿ ಮಾತನಾಡಿದರು.

ಪೊಲೀಸ್‌ ಇಲಾಖೆ ಹಾಗೂ ಆರೋಗ್ಯ ಇಲಾಖೆಯು ಅತ್ಯಂತ ಶ್ರಮ ವಹಿಸಿ ಕೆಲಸ ಮಾಡುವ ಇಲಾಖೆ ಆಗಿದ್ದು, ಹೆಚ್ಚು ಒತ್ತಡ ಇರುತ್ತದೆ. ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಕೆಲಸದ ಒತ್ತಡ ಮರೆಯಾಗುತ್ತದೆ. ಕ್ರೀಡೆ ಅತ್ಯಂತ ಉತ್ಸಾಹದಿಂದ ಇರಲು ನೆರವಾಗುತ್ತದೆ ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆ ಅಧ್ಯಕ್ಷ ಡಾ. ಅರುಣ್‌ ಎಂ.ಎಸ್.‌ ಮಾತನಾಡಿ, ಐಎಂಎ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ ಆಯೋಜಿಸಿದ್ದು, ಕ್ರೀಡೆ ಎಲ್ಲರಲ್ಲಿಯೂ ಸ್ಫೂರ್ತಿ ನೀಡುವ ಜತೆಯಲ್ಲಿ ಸಂಘಟನಾ ಶಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ. ಭಾರತೀಯ ವೈದ್ಯಕೀಯ ಸಂಘದ ಸದಸ್ಯತ್ವ ನೋಂದಣಿ ಕೂಡ ಗಮನ ವಹಿಸಲಾಗಿದೆ. ರಾಜ್ಯ ಮಟ್ಟದಲ್ಲಿ ಸಂಘಟನೆ ಬಲಿಷ್ಠಗೊಳ್ಳಲು ಅನುಕೂಲವಾಗಿದೆ ಎಂದು ಹೇಳಿದರು. ಮೆಗ್ಗಾನ್‌ ಆಸ್ಪತ್ರೆ ಅಧೀಕ್ಷಕ ಡಾ. ಎಸ್‌.ಶ್ರೀಧರ್‌, ಸುಬ್ಬಯ್ಯ ಆಸ್ಪತ್ರೆಯ ಎಂ.ಡಿ. ನಾಗೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!