ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ ಒತ್ತಾಯ

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ ಒತ್ತಾಯ

ಶಿವಮೊಗ್ಗ | 29 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಸದನದ ಗಮನ ಸೆಳೆಯುವ ಜತೆಯಲ್ಲಿ ಈಡೇರಿಸುವಂತೆ ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕ್ಲರ್ಕ್‌, ಡಿಇಓ, ಬಿಲ್‌ ಕಲೆಕ್ಟರ್‌ ಹಾಗೂ ಡಾಟ ಎಂಟ್ರಿ ಆಪರೇಟರ್‌ಗಳನ್ನು ʼಸಿʼ ದರ್ಜೆಗೆ ಮೇಲ್ದರ್ಜೆಗೇರಿಸಬೇಕು. ಅಟೆಂಡರ್‌, ಕ್ಲೀನರ್‌, ವಾಟರ್‌ ಮ್ಯಾನ್‌ ಇತ್ಯಾದಿ ವೃಂದದವರನ್ನು ʼಡಿʼ ದರ್ಜೆಗೆ ಏರಿಸಬೇಕು.

ನಗರ ಮತ್ತು ಪಟ್ಟಣ ಪಂಚಾಯಿತಿಯಂತೆ ಪಂಚಾಯಿತಿ ನೌಕರರಿಗೂ ಕನಿಷ್ಠ ವೇತನ ಬದಲು ವೇತನಶ್ರೇಣಿ ನಿಗದಿಪಡಿಸುವುದು. ನೌಕರರು ಮತ್ತು ನೌಕರರ ಅವಲಂಬಿತರಿಗೆ ಸರ್ಕಾರದಿಂದ ಸೂಕ್ತ ಆರೋಗ್ಯ ಭದ್ರತೆಯೊಂದಿಗೆ ಮುಂದಿನ ನಿವೃತ್ತಿ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವುದು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಹತ್ತಾರು ವರ್ಷಗಳಿಗಿಂತ ಹೆಚ್ಚು ಕಾಲ ಗ್ರಾಮ ಪಂಚಾಯಿತಿ ನೌಕರರರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಕನಿಷ್ಠ ವೇತನ ಭದ್ರತೆಯೂ ಸೇರಿ ಆರೋಗ್ಯ ಮತ್ತು ನಿವೃತ್ತಿ ಜೀವನದ ಆರ್ಥಿಕ ಭದ್ರತೆ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸರ್ಕಾರದಲ್ಲಿ ಮನವಿ ಮಾಡಿದರು. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಭಾನಾಯಕರು ಉತ್ತರಿಸಿದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!