ನಿಮ್ಮ ಆಸಕ್ತಿ ಕ್ಷೇತ್ರದಲ್ಲಿ ಧೈರ್ಯವಾಗಿ ಮುನ್ನಡೆದು ಯಶಸ್ಸು ಸಾಧಿಸಿ, ಡಿವಿಎಸ್‌ ಸ್ವತಂತ್ರ ಪಿಯು ಕಾಲೇಜಿನ ಸುವರ್ಣ ಸಂಭ್ರಮದಲ್ಲಿ ಚಿತ್ರ ನಟಿ, ರಾಬರ್ಟ್‌ ನಾಯಕಿ ಆಶಾ ಭಟ್

ನಿಮ್ಮ ಆಸಕ್ತಿ ಕ್ಷೇತ್ರದಲ್ಲಿ ಧೈರ್ಯವಾಗಿ ಮುನ್ನಡೆದು ಯಶಸ್ಸು ಸಾಧಿಸಿ, ಡಿವಿಎಸ್‌ ಸ್ವತಂತ್ರ ಪಿಯು ಕಾಲೇಜಿನ ಸುವರ್ಣ ಸಂಭ್ರಮದಲ್ಲಿ ಚಿತ್ರ ನಟಿ, ರಾಬರ್ಟ್‌ ನಾಯಕಿ ಆಶಾ ಭಟ್

ಶಿವಮೊಗ್ಗ | 30 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ

‌ವಿದ್ಯಾರ್ಥಿಗಳು ನಿಮ್ಮ ಇಷ್ಟದ ಕ್ಷೇತ್ರದಲ್ಲಿ ಸಾಧಿಸಲು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ಆಸಕ್ತಿ ಹೊಂದಿರುವ ಕ್ಷೇತ್ರಕ್ಕೆ ಸಂಬಂಧಿಸಿದ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದು ಚಿತ್ರ ನಟಿ, ರಾಬರ್ಟ್‌ ನಾಯಕಿ ಆಶಾ ಭಟ್‌ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಶಿವಮೊಗ್ಗ ನಗರದದ ಡಿವಿಎಸ್‌ ಪದವಿಪೂರ್ವ ( ಸ್ವತಂತ್ರ ) ಕಾಲೇಜಿನ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಪ್ರಯುಕ್ತ ಆಯೋಜಿಸಿದ್ದ “ಡಿವಿಎಸ್‌ ಆವಿಷ್ಕಾರ” ಜ್ಞಾನ-ವಿಜ್ಞಾನ-ವಿಕಾಸ-ವೀಕ್ಷಣೆ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ಪಡೆಯುವ ಹಂತದಲ್ಲಿಯೇ ನಿಮ್ಮ ಪ್ರತಿಭೆ, ಆಸಕ್ತಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಿ, ನೀವು ಆಯ್ಕೆ ಮಾಡಿಕೊಂಡ ಕ್ಷೇತ್ರದಲ್ಲಿ ಪ್ರೀತಿಯಿಂದ ಕೆಲಸ ಮಾಡಿ, ನಿಮ್ಮಲ್ಲಿ ನಂಬಿಕೆ ಇಟ್ಟು ಮುನ್ನಡೆದರೆ ಖಂಡಿತ ಜೀವನದಲ್ಲಿ ಯಶಸ್ಸು, ಸಂತೋಷ ಸಿಗುತ್ತದೆ ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]
ದೇಶಿಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್‌.ಪಿ.ದಿನೇಶ್‌ ಮಾತನಾಡಿ, ಡಿವಿಎಸ್‌ ಸ್ವತಂತ್ರ ಪಿಯು ಕಾಲೇಜಿನ ಸುವರ್ಣ ಮಹೋತ್ಸವ ನಡೆಯುತ್ತಿದ್ದು, ಸಂಸ್ಥೆಯಲ್ಲಿ ಅಧ್ಯಯನ ನಡೆಸಿದ ವಿದ್ಯಾರ್ಥಿಗಳು ವೈದ್ಯ ವೃತ್ತಿ, ಇಂಜಿನಿಯರ್‌, ಐಎಎಸ್‌ ಅಧಿಕಾರಿ ಸೇರಿದಂತೆ ಉನ್ನತ ಸ್ಥಾನಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.

ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್‌.ರುದ್ರಪ್ಪ ಕೊಳಲೆ, ಕಾರ್ಯದರ್ಶಿ ಎಸ್.ರಾಜಶೇಖರ್‌, ಸಹ ಕಾರ್ಯದರ್ಶಿ ಡಾ. ಎ.ಸತೀಶ್‌ ಕುಮಾರ್‌ ಶೆಟ್ಟಿ, ಖಜಾಂಚಿ ಬಿ.ಗೋಪಿನಾಥ್‌, ನಿರ್ದೇಶಕ ಎಂ.ರಾಜು, ನಿತಿನ್‌, ಡಿವಿಎಸ್‌ ಪದವಿಪೂರ್ವ ( ಸ್ವತಂತ್ರ ) ಕಾಲೇಜಿನ ಪ್ರಾಚಾರ್ಯ ಎ.ಇ.ರಾಜಶೇಖರ್‌ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!