ನೆಹರು ಕ್ರೀಡಾಂಗಣದಲ್ಲಿ 2023ರ ಜನವರಿ 15ಕ್ಕೆ ಯೋಗಾಥಾನ್, 10 ಸಾವಿರಕ್ಕೂ ಅಧಿಕ ಯೋಗ ಆಸಕ್ತರು ಭಾಗಿ

ನೆಹರು ಕ್ರೀಡಾಂಗಣದಲ್ಲಿ 2023ರ ಜನವರಿ 15ಕ್ಕೆ ಯೋಗಾಥಾನ್, 10 ಸಾವಿರಕ್ಕೂ ಅಧಿಕ ಯೋಗ ಆಸಕ್ತರು ಭಾಗಿ

ಶಿವಮೊಗ್ಗ | 31 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ

ಸ್ವಾಮಿ ವಿವೇಕಾನಂದರ ಜನ್ಮ‌ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ಸಪ್ತಾಹ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2023ರ ಜನವರಿ 15ರಂದು ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಯೋಗಾಥಾನ್ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಯೋಗಾಥಾನ್‌ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ನಗರದ ನೆಹರು ಕ್ರೀಡಾಂಗಣದಲ್ಲಿ 10,000 ಯೋಗಾಸಕ್ತರಿಂದ ಯೋಗಾಥಾನ್ ಕಾರ್ಯಕ್ರಮವನ್ನು ವಿಶಿಷ್ಟ ರೀತಿಯಲ್ಲಿ ರೂಪಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಯೋಗ ಪಠ್ಯ  ಅಳವಡಿಸಲಾಗಿದೆ. ಕೇಂದ್ರ ಆಯುಷ್ ಮಂತ್ರಾಲಯವು ಯೋಗ ಫಾರ್ ವೆಲ್‌ನೆಸ್ ಕಾರ್ಯಕ್ರಮದ ಮೂಲಕ 10,000 ಯೋಗ ಬೋಧಕರು ಮತ್ತು ಯೋಗ ತರಬೇತಿ ಪಡೆದ 10 ಲಕ್ಷ ವಿದ್ಯಾರ್ಥಿಗಳನ್ನು ಸೃಜಿಸುವ ಉದ್ದೇಶ ಹೊಂದಿದೆ ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಯೋಗಾಥಾನ್ ಕಾರ್ಯಕ್ರಮಕ್ಕೆ ಹೆಚ್ಚಿನ ನೋಂದಣಿ ಮಾಡುವ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಬಹುಮಾನ ನೀಡಲಾಗುವುದು. ಕಾರ್ಯಕ್ರಮದ ಹೆಚ್ಚಿನ ಮಾಹಿತಿಗೆ ಸಾರ್ವಜನಿಕರು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಜಿಪಂ ಉಪಕಾರ್ಯದರ್ಶಿ ಜಯಲಕ್ಷ್ಮಮ್ಮ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ, ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!