ಸರ್ಜಿ ಆಸ್ಪತ್ರೆ ವೈದ್ಯ ಡಾ. ಸತೀಶ್‌ ನಿಧನ

ಸರ್ಜಿ ಆಸ್ಪತ್ರೆ ವೈದ್ಯ ಡಾ. ಸತೀಶ್‌ ನಿಧನ

ಶಿವಮೊಗ್ಗ | 11 ಜನವರಿ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತೀವ್ರ ನಿಗಾ ಘಟಕದ ತಜ್ಞ ವೈದ್ಯ ಹಾಗೂ ಆಸ್ಪತ್ರೆಯ ಮೆಡಿಕಲ್‌ ಸೂಪರಿಡೆಂಟ್‌ ಡಾ.ಸತೀಶ್‌ ( 46 ) ನಿಧನರಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಡಾ. ಸತೀಶ್‌ ಮೂಲತಃ ದಾವಣಗೆರೆ ಜಿಲ್ಲೆಯ ತ್ಯಾವಣಗಿ ಗ್ರಾಮದವರು. 7-8 ವರ್ಷಗಳಿಂದ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅನಾರೋಗ್ಯದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಡಾ. ಸತೀಶ್‌ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

ಪತ್ನಿ ಡಾ. ಚೇತನಾ, ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞೆಯಾಗಿ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ. ಸ್ವಗ್ರಾಮ ದಾವಣಗೆರೆ ಜಿಲ್ಲೆಯ ತ್ಯಾವಣಗಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!