ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಪಡೆಯಿರಿ, ಶಿವಮೊಗ್ಗ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಲಭ್ಯ
ಶಿವಮೊಗ್ಗ | 19 ಜನವರಿ 2023 | ಡಿಜಿ ಮಲೆನಾಡು.ಕಾಂ
ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ನ ಎರಡು ಡೋಸ್ ಲಸಿಕೆ ಪಡೆದ ಸಾರ್ವಜನಿಕರು ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯಾದ ಕೋವಿಶೀಲ್ಡ್ 47,500 ಹಾಗೂ ಕೋವ್ಯಾಕ್ಸಿನ್ 18,600 ಡೋಸ್ ಲಸಿಕೆಗಳು ಲಭ್ಯವಿದೆ. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ, ಜಿಲ್ಲಾ ತರಬೇತಿ ಸಂಸ್ಥೆ, ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರು ಲಸಿಕೆ ಪಡೆದುಕೊಳ್ಳಬೇಕು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಬೂಸ್ಟರ್ ಡೋಸ್ ಲಸಿಕೆ ಪಡೆಯುವುದರಿಂದ ಮುಂದೆ ಬರಬಹುದಾದ ಕೋವಿಡ್-19 ಮಾರಣಾಂತಿಕ ರೋಗದಿಂದ ಪಾರಾಗಲು ಸಹಕಾರಿಯಾಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಹಾಗೂ ಆರ್‌ಸಿಹೆಚ್ ಅಧಿಕಾರಿ ಡಾ.ನಾಗರಾಜ್ ನಾಯ್ಕ ತಿಳಿಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu