ನೃತ್ಯ, ಸಂಗೀತ ಕ್ಷೇತ್ರದಲ್ಲಿ ಪರಿಣಿತಿ ಕಲಾಕೇಂದ್ರ ಅಪಾರ ಸೇವೆ, 8ನೇ ವರ್ಷದ ಪರಿಣಿತಿ ರಾಷ್ಟ್ರೀಯ ನೃತ್ಯ ಸಂಗೀತೋತ್ಸವ

ನೃತ್ಯ, ಸಂಗೀತ ಕ್ಷೇತ್ರದಲ್ಲಿ ಪರಿಣಿತಿ ಕಲಾಕೇಂದ್ರ ಅಪಾರ ಸೇವೆ, 8ನೇ ವರ್ಷದ ಪರಿಣಿತಿ ರಾಷ್ಟ್ರೀಯ ನೃತ್ಯ ಸಂಗೀತೋತ್ಸವ

ಸಾಗರ | 22 ಜನವರಿ 2023 | ಡಿಜಿ ಮಲೆನಾಡು.ಕಾಂ

ಪ್ರತಿಭಾವಂತ ನೃತ್ಯ ಕಲಾವಿದರಿಗೆ ಸೂಕ್ತ ಪ್ರೋತ್ಸಾಹ ಹಾಗೂ ಉತ್ತಮ ವೇದಿಕೆಗಳನ್ನು ಕಲ್ಪಿಸಿಕೊಡುವ ಕಾರ್ಯ ಶ್ಲಾಘನೀಯ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಪರಿಣಿತಿ ಕಲಾಕೇಂದ್ರದ 8ನೇ ವರ್ಷದ ಸಂಭ್ರಮದ ಪ್ರಯುಕ್ತ ಸಾಗರದ ಗಾಂಧಿ ಮೈದಾನದಲ್ಲಿ ಪರಿಣಿತಿ ಕಲಾಕೇಂದ್ರದ ವತಿಯಿಂದ ಆಯೋಜಿಸಿದ್ದ “8ನೇ ವರ್ಷದ ಪರಿಣಿತಿ ರಾಷ್ಟ್ರೀಯ ನೃತ್ಯ ಸಂಗೀತೋತ್ಸವ2023” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಾಲೂಕಿನ ಪರಿಣಿತಿ ಕಲಾಕೇಂದ್ರವು ನೃತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸುವ ಕೆಲಸ ಮಾಡುತ್ತಿದೆ. ಸಾಂಸ್ಕೃತಿಕ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿರುವ ಸಂಸ್ಥೆಗಳಲ್ಲಿ ಸಾಗರದ ಪರಿಣಿತಿ ಕಲಾಕೇಂದ್ರವು ಪ್ರಮುಖ ಎಂದು ತಿಳಿಸಿದರು.

ಜಾನಪದ ಕಲಾವಿದ ಜೋಗಿಲ ಸಿದ್ದರಾಜು ಮಾತನಾಡಿ, ರಾಷ್ಟ್ರೀಯ ಉತ್ಸವಗಳನ್ನು ತಾಲೂಕು ಕೇಂದ್ರಗಳಲ್ಲಿ ನಡೆಸುವುದರಿಂದ ಕಲಾ ಪ್ರಕಾರಗಳ ವಿನಿಮಯ ಹಾಗೂ ವಿವಿಧ ರಾಜ್ಯಗಳ ಕಲಾವಿದರ ಸಂವಹನಕ್ಕೆ ಸಹಕಾರಿ ಆಗುತ್ತದೆ ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಪರಿಣಿತಿ ಕಲಾಕೇಂದ್ರದ ವಿದ್ವಾನ್‌ ಎಂ.ಗೋಪಾಲ್‌ ಮಾತನಾಡಿ, ಸಾಗರ ತಾಲೂಕಿನಲ್ಲಿ ನಿರಂತರವಾಗಿ ಪ್ರತಿ ವರ್ಷ ರಾಷ್ಟ್ರೀಯ ನೃತ್ಯ ಸಂಗೀತೋತ್ಸವ ಆಯೋಜಿಸುತ್ತಿದ್ದು, ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಕಾರ್ಯವನ್ನು ಪರಿಣಿತಿ ಕಲಾಕೇಂದ್ರ ಮಾಡಿಕೊಂಡು ಬರುತ್ತಿದೆ ಎಂದು ತಿಳಿಸಿದರು. ರಾಷ್ಟ್ರೀಯ ನೃತ್ಯ ಸಂಗೀತೋತ್ಸವಗಳಿಂದ ಸ್ಥಳೀಯ ಕಲಾವಿದರಿಗೆ ವಿವಿಧ ರಾಜ್ಯಗಳ ನೃತ್ಯ ಪ್ರಕಾರಗಳ ಬಗ್ಗೆ ಅರಿವು ಮೂಡುತ್ತದೆ ಎಂದರು.

ಪರಿಣಿತಿ ಕಲಾಕೇಂದ್ರದ ಗೌರವಾಧ್ಯಕ್ಷೆ ವೀಣಾ ಬೆಳೆಯೂರು ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ ಭರತನಾಟ್ಯ ಕಲಾವಿದೆ ಶೀಲಾ ಚಂದ್ರಶೇಖರ್‌, ಸಾಗರ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್‌, ಉದ್ಯಮಿ ಟಿ.ವಿ.ಪಾಂಡುರಂಗ, ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕ ಕೆ.ಸಿದ್ದಪ್ಪ, ಡಾ. ಗಣೇಶನ್‌, ಆನಂದ ಮಾದಲಗೆರೆ, ನಾಗರಾಜ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!