ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿರುವ ಜಿಲ್ಲೆ ಶಿವಮೊಗ್ಗ
ಶಿವಮೊಗ್ಗ | 26 ಜನವರಿ 2023 | ಡಿಜಿ ಮಲೆನಾಡು.ಕಾಂ
ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿರುವ ಜಿಲ್ಲೆ ಶಿವಮೊಗ್ಗ. ಉತ್ತಮ ಯೋಜನೆಗಳ ಮುಖಾಂತರ ಶಿವಮೊಗ್ಗ ಅಭಿವದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿವಮೊಗ್ಗ ವಿಮಾನ ನಿಲ್ದಾಣ ಶೀಘ್ರದಲ್ಲೇ ಲೋಕಾರ್ಪಣೆ ಆಗುತ್ತಿದ್ದು, ವಾಣಿಜ್ಯ, ಕೈಗಾರಿಕೆ, ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿಯು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲೆಯು ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಪ್ರಗತಿಪಥದಲ್ಲಿ ಮುನ್ನಡೆಯುತ್ತಿದ್ದು, ಪ್ರವಾಸೋದ್ಯಮ ಕ್ಷೇತ್ರಕ್ಕೂ ಹೆಚ್ಚಿನ ಅವಕಾಶಗಳಿವೆ. ಮುಂದಿನ ದಿನಗಳಲ್ಲಿ ಪರಸ್ಪರ ಸಹಯೋಗದೊಂದಿಗೆ ಪ್ರವಾಸಿ ತಾಣಗಳ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಅಂಡಮಾನ್ ಪ್ರವಾಸದಲ್ಲಿ ಭಾಗವಹಿಸಿದ್ದ ಶಿವಮೊಗ್ಗದ ಪ್ರವಾಸಿಗರ ತಂಡವನ್ನು ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಲೋಕಸಭಾ ಸದಸ್ಯ ಕುಲದೀಪ್ ರಾಯ್ ಶರ್ಮ ಭೇಟಿ ಮಾಡಿದರು. ಇದೇ ಸಂದರ್ಭದಲ್ಲಿ ಮಾತನಾಡಿ, ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯ ನಡೆಸಲಾಗುವುದು ಎಂದರು.
ಅಂಡಮಾನ್ ಕ್ಷೇತ್ರದ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು, ಕೇಂದ್ರ ಸರ್ಕಾರ ಈಗಾಗಲೇ 90 ಸಾವಿರ ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಇದರಿಂದ ಪ್ರಸ್ತುತ ಚಿತ್ರಣವೇ ಬದಲಾಗಲಿದ್ದು, ಎಲ್ಲ ರೀತಿಯ ಆಧುನಿಕ ಸೌಲಭ್ಯಗಳೊಂದಿಗೆ ಪ್ರವಾಸಿ ಕ್ಷೇತ್ರಗಳ ಅಭಿವೃದ್ಧಿಯಾಗಲಿದೆ ಎಂದರು.
ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಜತೆಯಲ್ಲಿ ಅಂಡಮಾನ್ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ( ಎಂಒಯು ) ಸಹಿ ಮಾಡಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಜಂಟಿಯಾಗಿ ಅನುಷ್ಠಾನಗೊಳಿಸುವ ಕಾರ್ಯಯೋಜನೆ ನಡೆಸುವುದಾಗಿ ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಜೆ.ಆರ್.ವಾಸುದೇವ್ ಮಾತನಾಡಿ ಶಿವಮೊಗ್ಗ ಜಿಲ್ಲೆಯ ಕೈಗಾರಿಕಾ ಕ್ಷೇತ್ರದ ವೈಶಿಷ್ಟ್ಯಗಳ ಬಗ್ಗೆ ನುಡಿದರು. ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯ ಅಧ್ಯಕ್ಷ ಡಿ.ಎಂ.ಶಂಕರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯ ಸಹಕಾರ್ಯದರ್ಶಿ ಅ.ನ.ವಿಜಯೇಂದ್ರ ನಿರೂಪಿಸಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu