ಸರ್ಕಾರಿ ನೌಕರರ ಶಿವಮೊಗ್ಗದ ವಿಕಾಸ ಕೇಂದ್ರ ರಾಜ್ಯದಲ್ಲಿಯೇ ಮಾದರಿ
ಶಿವಮೊಗ್ಗ | 28 ಜನವರಿ 2023 | ಡಿಜಿ ಮಲೆನಾಡು.ಕಾಂ
ಪ್ರತಿದಿನ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ನೌಕರರಿಗೆ ಮಾನಸಿಕ ವಿಕಾಸ ಹಾಗೂ ದೈಹಿಕ ನೆಮ್ಮದಿಗಾಗಿ ಶಿವಮೊಗ್ಗದಲ್ಲಿನ ನೂತನ ವಿಕಾಸ ಕೇಂದ್ರ ಸಹಕಾರಿಯಾಗಲಿದೆ. ಈ ವಿಕಾಸ ಕೇಂದ್ರವು ರಾಜ್ಯದಲ್ಲಿಯೇ ಮಾದರಿಯಾಗಿದೆ ಎಂದು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ನಗರದ ಬಸವನಗುಡಿಯಲ್ಲಿ ನೂತನವಾಗಿ ಆರಂಭಿಸಿರುವ ಸರ್ಕಾರಿ ಅಧಿಕಾರಿ ಮತ್ತು ನೌಕರರ ವಿಕಾಸ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ವಿಶಾಲವಾದ ಪ್ರಾಂಗಣದಲ್ಲಿ ಆರಂಭಿಸಿರುವ ಕೇಂದ್ರದಲ್ಲಿ ಕ್ರೀಡೆ, ಸಾಹಸ ಚಟುವಟಿಕೆಗಳು ಹಾಗೂ ಪ್ರಮುಖ ಚಟುವಟಿಕೆಗಳಿಂದ ನೌಕರರಲ್ಲಿ ಮಾನಸಿಕ ಒತ್ತಡ ಕಡಿಮೆಯಾಗಿ ಮನೋಬಲ ವೃದ್ಧಿಯಾಗಲಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಮಾತನಾಡಿ, ಸರ್ಕಾರಿ ನೌಕರರ ಬಹು ದಿನಗಳ ಕನಸು ನನಸಾಗಿದೆ. ಇದರ ಯಶಸ್ಸಿನ ಹಿಂದೆ ಸಂಸದರ ಸಹಕಾರ, ಮಾರ್ಗದರ್ಶನ ಮತ್ತು ಸಿ.ಎಸ್.ಷಡಾಕ್ಷರಿ ಅವರ ಪ್ರಾಮಾಣಿಕ ಯತ್ನವಿದೆ. ರಾಜ್ಯದ ಬೇರೆ ಜಿಲ್ಲೆಯಲ್ಲಿ ಕಾಣದ ನೌಕರರ ಸಂಘಟನೆ ಇಲ್ಲಿ ಸಕ್ರಿಯವಾಗಿರುವುದು ಮಾದರಿಯಾಗಿದೆ ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ಜಿಲ್ಲೆಯಲ್ಲಿ ಶೇ. 25ರಷ್ಟು ಹುದ್ದೆಗಳು ಖಾಲಿ ಇವೆ. ಇಂತಹ ಅನೇಕ ಕೊರತೆ ಇದ್ದು, ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ನೌಕರರಿಗೆ ಕ್ಷಣ ಕಾಲ ನೆಮ್ಮದಿಯ ಬದುಕಿಗೆ ವಿಕಾಸ ಕೇಂದ್ರ ಸಹಕಾರಿಯಾಗಲಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ, ಜಿಪಂ ಸಿಇಒ ಎನ್.ಡಿ.ಪ್ರಕಾಶ್, ಪಾಲಿಕೆ ಆಯುಕ್ತ ಮಾಯಣ್ಣಗೌಡ, ಸ್ಮಾರ್ಟ್ ಸಿಟಿ ಚಿದಾನಂದ ಎಸ್.ವಟಾರೆ, ಲೋಕೋಪಯೋಗಿ ಮುಖ್ಯ ಅಭಿಯಂತರ ಬಿ.ಟಿ.ಕಾಂತರಾಜ್, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಕೆ.ನಾಗರಾಜ್, ಸೂಡಾ ಆಯುಕ್ತ ಕೊಟ್ರೇಶಪ್ಪ, ಉಪವಿಭಾಗಾಧಿಕಾರಿ ಚನ್ನಪ್ಪ, ಆರ್.ಮೋಹನ್‌ಕುಮಾರ್, ಅರುಣ್, ಕೃಷ್ಣಮೂರ್ತಿ, ಆರ್.ಪಾಪಣ್ಣ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu