ಪ್ರಜಾಸ್ನೇಹಿ ಆಡಳಿತ ಕುರಿತು ವಾಗ್ಮಿ ಡಾ. ಗುರುರಾಜ ಕರ್ಜಗಿ, ಕೆಲಸದ ಒತ್ತಡಕ್ಕೆ ನಗೆ ಮದ್ದು ಕುರಿತು ಗಂಗಾವತಿ ಪ್ರಾಣೇಶ್ ಉಪನ್ಯಾಸ, ಶಿವಮೊಗ್ಗದಲ್ಲಿ ಫೆಬ್ರವರಿ 4ಕ್ಕೆ ಕಾರ್ಯಕ್ರಮ
ಶಿವಮೊಗ್ಗ | 29 ಜನವರಿ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ಎನ್‌ಇಎಸ್ ಕಾಲೇಜಿನ ಆವರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಫೆಬ್ರವರಿ 4ರಂದು ಬೆಳಗ್ಗೆ 10.30ಕ್ಕೆ ಸರ್ಕಾರಿ ನೌಕರರ ಶಿವಮೊಗ್ಗ ತಾಲೂಕು ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಸರ್ಕಾರಿ ನೌಕರರ ಸಮ್ಮೇಳನದ ಕಾರ್ಯಕ್ರಮವನ್ನು ಶಾಸಕ ಕೆ.ಎಸ್.ಈಶ್ವರಪ್ಪ ಉದ್ಘಾಟಿಸುವರು. ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಫ್ಯಾಮಿಲಿ ಮಾರ್ಟ್ ಉದ್ಘಾಟಿಸುವರು. ಶಿವಮೊಗ್ಗ ತಾಲೂಕಿನ 8 ಸಾವಿರಕ್ಕೂ ಅಧಿಕ ನೌಕರರು ಪಾಲ್ಗೊಳ್ಳುವರು. ಸಮ್ಮೇಳನಕ್ಕೆ ಹಾಜರಾಗುವವರಿಗೆ ಒಒಡಿ ಸೌಲಭ್ಯ ಇರುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮ್ಮೇಳನದಲ್ಲಿ ಪ್ರಜಾಸ್ನೇಹಿ ಆಡಳಿತ ಕುರಿತು ವಾಗ್ಮಿ ಡಾ. ಗುರುರಾಜ ಕರ್ಜಗಿ ವಿಶೇಷ ಉಪನ್ಯಾಸ ನೀಡುವರು. ನಂತರ ಗಂಗಾವತಿ ಪ್ರಾಣೇಶ್ ತಂಡದಿಂದ ನಗೆಹಬ್ಬ ಕಾರ್ಯಕ್ರಮ ನಡೆಯಲಿದೆ. ಪ್ರಾಣೇಶ್ ಅವರು ಕೆಲಸದ ಒತ್ತಡಕ್ಕೆ ನಗೆ ಮದ್ದು ವಿಷಯ ಕುರಿತು ಮಾತನಾಡಲಿದ್ದಾರೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಆಯನೂರು ಮಂಜುನಾಥ್, ಡಿ.ಎಸ್.ಅರುಣ್, ಎಸ್.ಎಲ್.ಭೋಜೆಗೌಡ, ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಪದವೀಧರ ಸಹಕಾರ ಸಂಘದ ಅಧ್ಯಕ್ಷ ಎಸ್.ಪಿ.ದಿನೇಶ್, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪಾಲ್ಗೊಳ್ಳುವರು ಎಂದು ತಿಳಿಸಿದರು.
ಪ್ರಮುಖರಾದ ಆರ್.ಮೋಹನ್‌ಕುಮಾರ್, ಕೆ.ಅರುಣ್‌ಕುಮಾರ್, ಮಾರುತಿ, ಡಿ.ಟಿ.ಕೃಷ್ಣಮೂರ್ತಿ, ಆರ್.ಪಾಪಣ್ಣ ಸುದ್ದಿಗೋಷ್ಠಿಯಲ್ಲಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu