ಸಾಮಾಜಿಕ ಹಿತವು ಸರ್ವೋದಯ ವ್ಯವಸ್ಥೆಯ ಪ್ರತಿಪಾದನೆ
ಶಿವಮೊಗ್ಗ | 31 ಜನವರಿ 2023 | ಡಿಜಿ ಮಲೆನಾಡು.ಕಾಂ
ಸಮಾನತೆ ವ್ಯವಸ್ಥೆಯ ನಿರ್ಮಾಣಕ್ಕೆ ಸರ್ವೋದಯ ಕಲ್ಪನೆ ಪೂರಕವಾಗಿದೆ. ಸಾಮಾಜಿಕ ಹಿತದಲ್ಲಿ ವೈಯುಕ್ತಿಕ ಹಿತ ಕಾಣುವ, ಎಲ್ಲಾ ವೃತ್ತಿಯನ್ನು ಗೌರವಿಸುವ, ವ್ಯಕ್ತಿಯ ಶ್ರಮದಾನದ ಅವಶ್ಯಕತೆಯನ್ನು ಸರ್ವೋದಯ ವ್ಯವಸ್ಥೆಯು ಪ್ರತಿಪಾದಿಸುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ರಾಷ್ಟ್ರೀಯ ಶಿಕ್ಷಣ ಸಮಿತಿ ಅಮೃತ ಮಹೋತ್ಸವ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ಸರ್ವೋದಯ ಮಂಡಲದ ಸಹಯೋಗದಲ್ಲಿ ಸೋಮವಾರ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಏರ್ಪಡಿಸಿದ್ದ ಸರ್ವೋದಯ ದಿನಾಚರಣೆ ರಾಜ್ಯ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗಾಂಧೀಜಿ ಆಶಯದಂತೆ ಶಾಂತಿ ಸೌಹಾರ್ದ ಸಮಾಜ ನಿರ್ಮಾಣ ಮಾಡಲು ಶಿಕ್ಷಣದಿಂದ ಸಾಧ್ಯವಾಗಲಿದೆ. ಪ್ರಸ್ತುತ ದಿನಮಾನಕ್ಕೆ ತಕ್ಕಂತೆ ಗಾಂಧೀಜಿಯವರ ಆಶಯದ ಸಾಮಾಜಿಕ ವ್ಯವಸ್ಥೆಯನ್ನು ನಿರ್ಮಾಣ ಮಾಡಲು ಬೇಕಾದ ದಿಕ್ಸೂಚಿ ನೀಡುವ ಯೋಚನೆಗಳನ್ನು ಇಂತಹ ಕಾರ್ಯಕ್ರಮಗಳ ಮೂಲಕ ಯುವ ಸಮೂಹಕ್ಕೆ ನೀಡಬೇಕಿದೆ ಎಂದು ತಿಳಿಸಿದರು.
ಮೇಲುಕೋಟೆಯ ಜನಪದ ಸೇವಾ ಟ್ರಸ್ಟ್‌ನ ಸುಮನಸ್ ಕೌಲಗಿ ಮಾತನಾಡಿ, ಒಂದು ವಸ್ತುವಿನ ತಯಾರಿಕೆಯ ಹಿಂದಿನ ವಾಸ್ತವತೆ ಅರಿತು ವಸ್ತುಗಳನ್ನು ಕೊಂಡುಕೊಳ್ಳುವಾಗ ನೈತಿಕ ಜವಾಬ್ದಾರಿ ಗ್ರಾಹಕನಿಗೆ ಇರಬೇಕಿದೆ. ಬ್ರಾಂಡೆಡ್ ಬಟ್ಟೆಗಳ ಉತ್ಪಾದನೆಯ ಹಿಂದಿನ ಶೋಷಣೆಯ ಕರಾಳತೆಯ ಅರಿವಿರಬೇಕು. ನಮ್ಮ ಸುತ್ತಲಿನ ದೇಶೀಯ ಉತ್ಪಾದನಾ ವ್ಯವಸ್ಥೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕಿದೆ ಎಂದು ಹೇಳಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಅಧ್ಯಕ್ಷತೆ ವಹಿಸಿದ್ದ ಜಿ.ಎಸ್.ನಾರಾಯಣರಾವ್ ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಸರ್ವೋದಯ ಮಂಡಲ ರಾಜ್ಯಾಧ್ಯಕ್ಷ ಡಾ. ಹೆಚ್.ಎಸ್.ಸುರೇಶ್, ಕಾರ್ಯದರ್ಶಿ ಯು.ಚಿ.ದೊಡ್ಡಯ್ಯ, ಜಿಲ್ಲಾಧ್ಯಕ್ಷ ಭಗವಂತರಾವ್, ಪ್ರಾಂಶುಪಾಲ ಡಾ.ಹೆಚ್.ಎಸ್.ನಾಗಭೂಷಣ್ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu