ಎರಡನೇ ಜನ್ಮ ಕೊಟ್ಟ ಜಿಲ್ಲೆ ಶಿವಮೊಗ್ಗ ಎಂದ ರವಿ ಡಿ.ಚನ್ನಣ್ಣನವರ್, ಕಿಯೋನಿಕ್ಸ್‌ ಯೋಜನೆಗಳ ಬಗ್ಗೆಯು ಮಾಹಿತಿ ಹಂಚಿಕೆ

ಎರಡನೇ ಜನ್ಮ ಕೊಟ್ಟ ಜಿಲ್ಲೆ ಶಿವಮೊಗ್ಗ ಎಂದ ರವಿ ಡಿ.ಚನ್ನಣ್ಣನವರ್, ಕಿಯೋನಿಕ್ಸ್‌ ಯೋಜನೆಗಳ ಬಗ್ಗೆಯು ಮಾಹಿತಿ ಹಂಚಿಕೆ

ಶಿವಮೊಗ್ಗ | 5 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ಇಡೀ ಕರ್ನಾಟಕಕ್ಕೆ ರವಿ ಚನ್ನಣ್ಣನವರ್ ಯಾರು ಎಂದು ಪರಿಚಯಿಸಿದ್ದು ಶಿವಮೊಗ್ಗ ಜಿಲ್ಲೆ. ಇಲ್ಲಿ ಕೆಲಸ ಮಾಡಿದ ಪ್ರತಿ ದಿನವೂ ಸಂಭ್ರಮವೇ ಆಗಿತ್ತು. ಶಿವಮೊಗ್ಗ ಜಿಲ್ಲೆಯು ನನಗೆ ಎರಡನೇ ಜನ್ಮ ಕೊಟ್ಟ ಪುಣ್ಯ ಭೂಮಿ ಎಂದು ಕಿಯೊನಿಕ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರವಿ ಡಿ.ಚನ್ನಣ್ಣನವರ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿದ್ಯುನ್ಮಾನ  ಅಭಿವೃದ್ಧಿ ನಿಗಮ, ಚಿರಾಗ್ ಇನ್ಫೊಟೆಕ್, ಎಂ.ಬಿ.ಎ ಮತ್ತು ಎಂ.ಸಿ.ಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ಕಿಯೋನಿಕ್ಸ್ ಸಂಸ್ಥೆಯ ಉನ್ನತ ತರಬೇತಿ ಮಾಹಿತಿ‌ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಕಿಯೋನಿಕ್ಸ್ ನಿಂದ ವಿವಿಧ ಕೋರ್ಸ್: ಕಿಯೊನಿಕ್ಸ್ ಸಂಸ್ಥೆಯು ಐಐಟಿ ಐಐಎಂ ಪ್ರೊಫೆಸರ್‌ಗಳಿಂದ ಕೃತಕ ಬುದ್ಧಿಮತ್ತೆ, ಐಓಟಿ, ಸೈಬರ್ ಸೆಕ್ಯುರಿಟಿ ಸೇರಿದಂತೆ ಅನೇಕ ತಾಂತ್ರಿಕ ಉನ್ನತ ಕೋರ್ಸ್‌ಗಳನ್ನು ಒದಗಿಸುತ್ತಿದೆ. ಉನ್ನತ ಉದ್ಯೋಗ ಅವಕಾಶಗಳನ್ನು ಕೋರ್ಸ್ ಮುಗಿಸಿದ ವಿದ್ಯಾರ್ಥಿಗೆ ನೀಡಲಾಗುತ್ತದೆ ಎಂದು ತಿಳಿಸಿದರು.

ಅಮೆಜಾನ್ ರೀತಿಯಲ್ಲಿ ಕಿಯೋನಿಕ್ಸ್: ಕೆಲವೇ ದಿನಗಳಲ್ಲಿ ಕಿಯೋನಿಕ್ಸ್ ಸಂಸ್ಥೆಯು ಆನ್ಲೈನ್ ಅಮೆಜಾನ್ ಶಾಪಿಂಗ್ ರೀತಿಯಲ್ಲಿ ಕಾರ್ಯ ನಿರ್ವಹಿಸಲಿದೆ. ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಬೇಕಾದ ಸಾಫ್ಟ್‌ವೇರ್ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣಗಳ ಶಾಂಪಿಂಗ್ ಮಾಡಬಹುದಾಗಿದೆ ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಶಿವಮೊಗ್ಗ ಜಿಲ್ಲೆಗೆ ಇರುವಷ್ಟು ಅಭಿವೃದ್ಧಿ ಸಾಮರ್ಥ್ಯ ಬೇರಾವ ಜಿಲ್ಲೆಗಳಲ್ಲಿಯು ಇಲ್ಲ. ಶಿವಮೊಗ್ಗದಲ್ಲಿ ಉತ್ತಮ ಸ್ಟಾರ್ಟ್ ಅಪ್ ಗಳನ್ನು ಪ್ರಾರಂಭಿಸಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಿಯೋನಿಕ್ಸ್ ಸಂಸ್ಥೆಯ ಆಯೋಜಕ ನಿರ್ದೇಶಕ ಕುಮಾರ್.ಪಿ, ಕೋರ್ಸ್ ನಿರ್ದೇಶಕ ಡಾ.ಸರೀತ್ ಕುಮಾರ್, ಜೆಎನ್ಎನ್ ಕಾಲೇಜಿನ ಪ್ರಾಚಾರ್ಯ ಡಾ. ಕೆ.ನಾಗೇಂದ್ರಪ್ರಸಾದ್, ಡಿವೈಎಸ್‌ಪಿ ಸುರೇಶ್, ಚಿರಾಗ್ ಇನ್ಫೊಟೆಕ್ ಗಿರೀಶ್.ಡಿ.ಪಿ, ಎಂಸಿಎ ವಿಭಾಗದ ನಿರ್ದೇಶಕ ಡಾ.ಪ್ರಭುದೇವ, ಎಂಬಿಎ ವಿಭಾಗದ ನಿರ್ದೇಶಕ ಡಾ. ಶ್ರೀಕಾಂತ್, ಸಹ ಪ್ರಾಧ್ಯಾಪಕ ಪ್ರಶಾಂತ್ ಅಂಕಲಕೋಟಿ, ವಿಕ್ರಮ್ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!