ಶ್ರೀ ಮಾರಿಕಾಂಬ ಜಾತ್ರೆಗೆ ಸಿಂಗಾರಗೊಳ್ಳುತ್ತಿದೆ ಸಾಗರ

ಶ್ರೀ ಮಾರಿಕಾಂಬ ಜಾತ್ರೆಗೆ ಸಿಂಗಾರಗೊಳ್ಳುತ್ತಿದೆ ಸಾಗರ

ಶಿವಮೊಗ್ಗ | 6 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬ ಜಾತ್ರೆ ಹಿನ್ನೆಲೆಯಲ್ಲಿ ಇಡೀ ಸಾಗರ ಪಟ್ಟಣವೇ ಸಿಂಗಾರಗೊಳ್ಳುತ್ತಿದ್ದು, ಎಲ್ಲ ಕಡೆಯಲ್ಲಿಯೂ ಜಾತ್ರೆಯ ವೈಭವದ ಸಿದ್ಧತೆ ಮನೆ ಮಾಡಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಜಾತ್ರಾ ಸಂಭ್ರಮದ ಹಿನ್ನೆಲೆಯಲ್ಲಿ ಇಡೀ ಪಟ್ಟಣದಲ್ಲಿ ವೈವಿಧ್ಯಮಯ ಅಂಗಡಿ, ಮಳಿಗೆ, ಮನೋರಂಜನಾ ಆಟಿಕೆ, ಸಿಹಿತಿಂಡಿಗಳ ಅಂಗಡಿ, ಬಳೆ ಸಾಮಾಗ್ರಿಗಳ ಅಂಗಡಿ ಸೇರಿದಂತೆ ಸಾಲು ಸಾಲು ಮಳಿಗೆಗಳು ಜಾತ್ರೆಗಾಗಿ ಸಿದ್ಧಗೊಳ್ಳುತ್ತಿವೆ. ಜಿಲ್ಲೆಯ ಜನರು, ಸುತ್ತಮುತ್ತಲಿನ ಜಿಲ್ಲೆ ಹಾಗೂ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ಜಾತ್ರೆಯ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಾರೆ. ಜಾತ್ರಾ ಸಮಯದಲ್ಲಿ ನಡೆಯುವ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ ವೀಕ್ಷಿಸಲು ಸಾವಿರಾರು ಜನರು ಆಗಮಿಸುತ್ತಾರೆ.

ಸಾಗರದ ಶ್ರೀ ಮಾರಿಕಾಂಬಾ ಜಾತ್ರಾ ಹಿನ್ನೆಲೆಯಲ್ಲಿ ಪ್ರತಿ ನಿತ್ಯ ಆಗಮಿಸುವ ಸಾರ್ವಜನಿಕರಿಗೆ ಸಮಿತಿ ವತಿಯಿಂದ ಅನ್ನ ಸಂತರ್ಪಣೆ ವ್ಯವಸ್ಥೆ ಇರುತ್ತದೆ. ಎಲ್ಲರಿಗೂ ಮಧ್ಯಾಹ್ನ ಹಾಗೂ ರಾತ್ರಿ ಅನ್ನ ಸಂತರ್ಪಣೆ ಮಾಡಲಾಗುತ್ತದೆ. ಪಟ್ಟಣದ ಸ್ಥಳೀಯ ಸಂಘ ಸಂಸ್ಥೆಗಳು ಸಹ ಉಚಿತವಾಗಿ ಪಾನೀಯ, ಉಪಾಹಾರ ವ್ಯವಸ್ಥೆ ಮಾಡಿರುತ್ತವೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಸಾಗರ ನಗರಸಭೆ ಅವರಣದಲ್ಲಿ ಮಾರಿಕಾಂಬ ಕಲಾ ವೇದಿಕೆಯಲ್ಲಿ ದಿನವೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಫೆ. 8ರಿಂದ 15ರವರೆಗೂ ಸಂಜೆ 5.30ರಿಂದ ರಾತ್ರಿವರೆಗೂ ವೈವಿಧ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಲಾವಿದರು ನಡೆಸಿಕೊಡಲಿದ್ದಾರೆ. ಚಂಡೆವಾದನ, ಭರತನಾಟ್ಯ, ರಸಮಂಜರಿ, ಯೋಗ, ಡೊಳ್ಳು ಪ್ರದರ್ಶನ, ಸುಗಮ ಸಂಗೀತ, ಮಲ್ಲಗಂಬ, ಸಾಕ್ಸೋಫೋನ್ ವಾದನ ಸೇರಿದಂತೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ.

ವಸ್ತು ಪ್ರದರ್ಶನ ಫೆಬ್ರವರಿ 7ರ ಸಂಜೆ 5ಕ್ಕೆ: ಸಾಗರದ ಶ್ರೀ ಮಾರಿಕಾಂಬ ಜಾತ್ರೆ ಹಿನ್ನೆಲೆಯಲ್ಲಿ ಸಾಗರ ನಗರದ ನೆಹರು ಮೈದಾನದಲ್ಲಿ ಫೆ. 7ರ ಸಂಜೆ 5ಕ್ಕೆ ವಸ್ತು ಪ್ರದರ್ಶನವನ್ನು ಸಾಗರ ಕ್ಷೇತ್ರ ಶಾಸಕ ಹರತಾಳು ಹಾಲಪ್ಪ ಉದ್ಘಾಟಿಸುವರು. ಸಾಗರ ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ, ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್, ಸಾಗರ ಗ್ರಾಮಾಂತರ ಠಾಣೆ ವೃತ್ತ ನೀರಿಕ್ಷಕ ಕೃಷ್ಣಪ್ಪ, ಸಾಗರ ಠಾಣೆ ವೃತ್ತ ನೀರಿಕ್ಷಕ ಸೀತಾರಾಮ್, ಮೆಸ್ಕಾಂ ಇಇ ವೆಂಕಟೇಶ್, ಎಇಇ ಮಂಜುನಾಥ ಉಪಸ್ಥಿತರಿರುವರು. ಶ್ರೀ ಮಾರಿಕಾಂಬ ಜಾತ್ರಾ ಸಮಿತಿಯ ಅಧ್ಯಕ್ಷ ಕೆ.ಎನ್.ನಾಗೇಂದ್ರ ಅಧ್ಯಕ್ಷತೆ ವಹಿಸುವರು. ಸಮಿತಿ ಪ್ರಧಾನ ಕಾರ್ಯದರ್ಶಿ ಗಿರಿಧರರಾವ್, ಸಮಿತಿ ಸಂಚಾಲಕ ತಾರಾಮೂರ್ತಿ, ಸಹಸಂಚಾಲಕ ಬಾಲಕೃಷ್ಣ ಗುಳೇದ್, ಮಂಜುನಾಥ್, ಉಪಾಧ್ಯಕ್ಷ ಸುಂದರ್‌ಸಿಂಗ್, ವಿ.ಶಂಕರ್, ರಾಮಪ್ಪ, ಸಹ ಕಾರ್ಯದರ್ಶಿ ವಿ.ಕೃಷ್ಣಮೂರ್ತಿ, ಎಂ.ಡಿ.ಆನಂದ್, ಖಜಾಂಚಿ ನಾಗೇಂದ್ರ ಎಸ್.ಕುಮುಟಾ ಉಪಸ್ಥಿತರಿರುವರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!