ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆಗೆ ಚಾಲನೆ, ಮೊದಲ ದಿನ ದರ್ಶನ ಪಡೆದ ಸಾವಿರಾರು ಜನರು

ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆಗೆ ಚಾಲನೆ, ಮೊದಲ ದಿನ ದರ್ಶನ ಪಡೆದ ಸಾವಿರಾರು ಜನರು

ಸಾಗರ | 7 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಗೆ ಮಂಗಳವಾರ ಅದ್ಧೂರಿಯಾಗಿ ಚಾಲನೆ ದೊರಕಿತು. ಒಂಬತ್ತು ದಿನಗಳ ಕಾಲ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆಯ ಮೊದಲ ದಿನದ ಪೂಜಾ ವಿಧಿ ವಿಧಾನಗಳು ಬೆಳಗ್ಗೆ ಬ್ರಾಹ್ಮೀ ಮಹೂರ್ತದಲ್ಲಿ ನಡೆಯಿತು. ಜಾತ್ರೆಯ ಮೊದಲ ದಿನವೇ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯದಲ್ಲಿ ತಾಯಿ ಶ್ರೀ ಮಾರಿಕಾಂಬೆಯ ತಾಳಿ ಮತ್ತು ಆಭರಣಗಳಿಗೆ ಪೂಜೆ ಸಲ್ಲಿಸಲಾಯಿತು. ವಿಧಿವಿಧಾನಗಳನ್ನು ದೇವಾಲಯದ ಪ್ರಧಾನ ಅರ್ಚಕ ವಿದ್ವಾನ್ ಪಿ.ಎಲ್.ಗಜಾನನ ಭಟ್ ನೆರವೇರಿಸಿದರು. ಶ್ರೀ ಮಾರಿಕಾಂಬಾ ಜಾತ್ರಾ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ನಂತರ ಸಂಪ್ರದಾಯದಂತೆ ಪುರೋಹಿತ ರಮೇಶ ಭಟ್ಟರ ಮನೆಯಲ್ಲಿ ಪೂಜಾ ಕಾರ್ಯಕ್ರಮ ನಡೆದವು.

ಶ್ರೀ ಮಹಾಗಣಪತಿ ದೇವಾಲಯದಿಂದ ಮಂಗಳವಾದ್ಯಗಳೊಂದಿಗೆ ಸಾಗರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿ ಬಂದ ದೇವಿಯ ಆಭರಣಗಳನ್ನು ತವರುಮನೆಗೆ ತರಲಾಯಿತು. ಸಾಗರ ನಗರದ ತವರು ಮನೆಯಲ್ಲಿ ಪ್ರತಿಷ್ಠಾಪಿಸಿದ್ದ ಅತ್ಯಾಕರ್ಷಕವಾದ ಶ್ರೀ ಮಾರಿಕಾಂಬಾ ವಿಗ್ರಹಕ್ಕೆ ವಿವಿಧ ಸಾಂಪ್ರಾದಾಯಿಕ ಆಚರಣೆಗಳನ್ನು ನಡೆಸಿ ಆಭರಣಗಳನ್ನು ತೊಡಿಸಲಾಯಿತು.

ಪೂಜಾ ಕಾರ್ಯಕ್ರಮದ ನಂತರ ತಾಯಿಯ ವಿಗ್ರಹಕ್ಕೆ ಭಾರಿ ಗಾತ್ರದ ಹಾರ ಸೇರಿದಂತೆ ವೈವಿಧ್ಯಮಯ ಹೂವಿನ ಅಲಂಕಾರ ನಡೆಸಿ ಮಹಾಮಂಗಳಾರತಿ ನಡೆಸಲಾಯಿತು. ನಂತರ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಗಣಪತಿ ದೇವಸ್ಥಾನದಿಂದ ಮಾರಿಕಾಂಬಾ ದೇವಸ್ಥಾನದ ತವರು ಮನೆಯವರೆಗೂ ಮೆರವಣಿಗೆಯಲ್ಲಿ ಸಾಗರದ ದೈವಜ್ಞ ಮಹಿಳಾ ಸಮಾಜದ ಸದಸ್ಯರು ಚಂಡೆವಾದನ ನಡೆಸಿಕೊಟ್ಟರು. ಶ್ರೀ ಮಾರಿಕಾಂಬಾ ಜಾತ್ರೆಯ ಮೊದಲ ದಿನ ತವರುಮನೆಯಲ್ಲಿ ಶ್ರೀ ಮಾರಿಕಾಂಬೆ ದರ್ಶನಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೋಮವಾರ ರಾತ್ರಿಯಿಂದಲೇ ಸರದಿ ಸಾಲಿನಲ್ಲಿ ನಿಂತಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!