ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಯ ಸಾಂಸ್ಕೃತಿಕ ಉತ್ಸವ ಫೆಬ್ರವರಿ 8ಕ್ಕೆ
ಸಾಗರ | 7 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ
ಸಾಗರದ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ನಗರಸಭೆ ಆವರಣದ ಮಾರಿಕಾಂಬ ಕಲಾವೇದಿಕೆಯಲ್ಲಿ ಫೆ. 8ರಂದು ಸಂಜೆ 7ಕ್ಕೆ ಆಯೋಜಿಸಿರುವ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ಶಾಸಕ ಹರತಾಳು ಹಾಲಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಉದ್ಘಾಟಿಸುವರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ರಂಗಕರ್ಮಿ ಟಿ.ಎಸ್.ನಾಗಾಭರಣ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಶ್ರೀ ಮಾರಿಕಾಂಬಾ ಜಾತ್ರಾ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ ಅಧ್ಯಕ್ಷತೆ ವಹಿಸುವರು. ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಕೆ.ಎಸ್.ಈಶ್ವರಪ್ಪ, ಕುಮಾರ್ ಬಂಗಾರಪ್ಪ, ಆಯನೂರು ಮಂಜುನಾಥ್, ಭಾರತಿ ಶೆಟ್ಟಿ, ಡಿ.ಎಸ್.ಅರುಣ್, ಎಸ್.ರುದ್ರೇಗೌಡ, ಎಸ್.ಎಲ್.ಭೋಜೆಗೌಡ, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಎಸ್‌ಪಿ ಮಿಥುನ್‌ಕುಮಾರ್, ಸಾಗರ ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ, ರೋಹನ್ ಜಗದೀಶ್ ಉಪಸ್ಥಿತರಿರುವರು.
ಸಮಿತಿ ಪ್ರಧಾನ ಕಾರ್ಯದರ್ಶಿ ಗಿರಿಧರರಾವ್, ಸಮಿತಿ ಸಂಚಾಲಕ ಲೋಕೇಶ್ ಕುಮಾರ್ ಗುಡಿಗಾರ್, ಸಹ ಸಂಚಾಲಕ ರಾಮಚಂದ್ರ ಜಿ.ನಾಗೇಶ್, ಉಪಾಧ್ಯಕ್ಷ ಸುಂದರ್‌ಸಿಂಗ್, ವಿ.ಶಂಕರ್, ರಾಮಪ್ಪ, ಸಹ ಕಾರ್ಯದರ್ಶಿ ವಿ.ಕೃಷ್ಣಮೂರ್ತಿ, ಎಂ.ಡಿ.ಆನಂದ್, ಖಜಾಂಚಿ ನಾಗೇಂದ್ರ ಎಸ್.ಕುಮುಟಾ ಉಪಸ್ಥಿತರಿರುವರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಕಲಾಸಿರಿ ಕಾರ್ಯಕ್ರಮ : ಸಾಗರದ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ನಿರ್ಮಿಸಿರುವ ನಗರಸಭೆ ಆವರಣದ ಮಾರಿಕಾಂಬಾ ಕಲಾವೇದಿಕೆಯಲ್ಲಿ ಫೆ. 8ರಂದು ಸಂಜೆ ಕಲಾಸಿರಿ ಕಾರ್ಯಕ್ರಮ ನಡೆಯಲಿದೆ. ಫೆ. 8ರ ಸಂಜೆ 5.30ರಿಂದ 6ರವರೆಗೆ ದೈವಜ್ಞ ಕಲಾಬಳಗದಿಂದ ಚಂಡೆವಾದನ, ಸಂಜೆ 6ರಿಂದ 6.30ರವರೆಗೆ ಡಾ. ಬಿ.ಆರ್.ಅಂಬೇಡ್ಕರ್ ಕೋಲಾಟ ಬಳಗದಿಂದ ಕೋಲಾಟ ನಡೆಯಲಿದೆ.
ಸಂಜೆ 6.45ರವರೆಗೆ ಶ್ರೀ ಶಾರದಾಂಬ ಸಾಂಸ್ಕೃತಿಕ ಕಲಾಕೇಂದ್ರ ಟ್ರಸ್ಟ್ ವತಿಯಿಂದ ಭರತನಾಟ್ಯ, ನಂತರ ಸಭಾ ಕಾರ್ಯಕ್ರಮ, ರಾತ್ರಿ 8ರಿಂದ 9ರವರೆಗೆ ಪರಂಪರಾ ಫ್ಯೂಜನ್ ಬ್ಯಾಂಡ್‌ನಿಂದ ವಿವಿಧ ವಾದ್ಯಗಳ ಸಂಗೀತ ಕಾರ್ಯಕ್ರಮ, 9.30ರವರೆಗೆ ಫ್ರೆಂಡ್ಸ್ ಮ್ಯೂಸಿಕ್ ಮತ್ತು ಮೆಲೊಡಿಸ್ ಜ್ಯೂನಿಯರ್ ಕಲಾವಿದರಿಂದ ರಸಮಂಜರಿ, 10ರವರೆಗೆ ನಾಟ್ಯಮಯೂರಿ ನೃತ್ಯ ಕಲಾಕೇಂದ್ರದಿಂದ ಭರತನಾಟ್ಯ, ನಂತರ ಮಾಸ್ಟರ್ ಶಂಕರ್ ಕಲಾವೃಂದ ಟ್ರಸ್ಟ್ ವತಿಯಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu