ಮುದ್ದಿನ ಸಾಕು ಪ್ರಾಣಿಗಳ ಮಾರಾಟ, ಮಳಿಗೆ ನಡೆಸಲು ನೋಂದಣಿ ಕಡ್ಡಾಯ, ತಪ್ಪಿದಲ್ಲಿ ಕಾನೂನು ಕ್ರಮ

ಮುದ್ದಿನ ಸಾಕು ಪ್ರಾಣಿಗಳ ಮಾರಾಟ, ಮಳಿಗೆ ನಡೆಸಲು ನೋಂದಣಿ ಕಡ್ಡಾಯ, ತಪ್ಪಿದಲ್ಲಿ ಕಾನೂನು ಕ್ರಮ

ಶಿವಮೊಗ್ಗ | 16 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ನಾಯಿಗಳ ತಳಿ ಸಂವರ್ಧನೆ, ಮಾರಾಟ ಹಾಗೂ ಮುದ್ದಿನ ಪ್ರಾಣಿಗಳ ಮಳಿಗೆ ನಡೆಸಲು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯ ಕಾರ್ಯದರ್ಶಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ನಾಯಿಗಳ ತಳಿ ಸಂವರ್ಧನೆ, ಮಾರಾಟ ಹಾಗೂ ಮುದ್ದಿನ ಪ್ರಾಣಿಗಳ ಮಳಿಗೆ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿ, ಸಂಸ್ಥೆಗಳು ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ಪಡೆಯುವ ಮುನ್ನ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ ( ನಾಯಿತಳಿ ಸಂವರ್ಧನೆ ಮತ್ತು ಮಾರಾಟ ನಿಯಮ-2018 ಮತ್ತು ಮುದ್ದಿನ ಪ್ರಾಣಿಗ ಮಳಿಗೆ ನಿಯಮ-2018ರ ಸೆಕ್ಷನ್ 3,4 ಮತ್ತು 5ರ) ಅಡಿಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯ ಆಗಿರುತ್ತದೆ.

ನಾಯಿಗಳ ತಳಿ ಸಂವರ್ಧನೆ, ಮಾರಾಟ ಹಾಗೂ ಮುದ್ದಿನ ಪ್ರಾಣಿಗಳ ಮಳಿಗೆ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿ, ಸಂಸ್ಥೆಗಳು ನಿಗಧಿತ ನಮೂನೆ ಅರ್ಜಿಯನ್ನು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪಡೆಯಬೇಕು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳು ಹಾಗೂ ನಿಗಧಿಪಡಿಸಿದ ಶುಲ್ಕದೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಗೆ ಸಲ್ಲಿಸಬೇಕು. ತಪ್ಪಿದಲ್ಲಿ ಅಂತಹವರ ವಿರುದ್ಧ ನಿಯಮಗಳ ಅನುಸಾರ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ.: 08182222969, 08182221428 ಸಂಪರ್ಕಿಬಹುದಾಗಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!