ಐಪಿಎಲ್‌ ವೇಳಾಪಟ್ಟಿ ಪ್ರಕಟ, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪಂದ್ಯ ಯಾರ ವಿರುದ್ಧ, ಯಾವಾಗ?

ಐಪಿಎಲ್‌ ವೇಳಾಪಟ್ಟಿ ಪ್ರಕಟ, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪಂದ್ಯ ಯಾರ ವಿರುದ್ಧ, ಯಾವಾಗ?

ಕ್ರಿಕೆಟ್ | 17 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ಐಪಿಎಲ್‌ 2023ರ ವೇಳಾಪಟ್ಟಿ ಪ್ರಕಟಗೊಂಡಿದ್ದು, ಮಾರ್ಚ್‌ 31ರಿಂದ ಐಪಿಎಲ್‌ ಪಂದ್ಯಗಳು ಆರಂಭಗೊಳ್ಳಲಿವೆ. ಮೇ 28ರಂದು ಫೈನಲ್‌ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್‌ ಗುಜರಾತ್‌ ಟೈಟಾನ್ಸ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ನಡುವೆ ಮೊದಲ ಪಂದ್ಯ ನಡೆಯಲಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಬೆಂಗಳೂರಿನಲ್ಲಿ ಏಪ್ರಿಲ್‌ 2ರಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ತನ್ನ ಮೊದಲ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡವನ್ನ ಎದುರಿಸಲಿದೆ. ಒಟ್ಟು ಟೂರ್ನಿಯಲ್ಲಿ70 ಲೀಗ್‌ ಪಂದ್ಯಗಳು ನಡೆಯಲಿದ್ದು, ಪ್ರತಿ ತಂಡ 14 ಪಂದ್ಯಗಳನ್ನು ಆಡಲಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಏಪ್ರಿಲ್‌ 6ರಂದು ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ವಿರುದ್ಧ, ಏಪ್ರಿಲ್‌ 10ರಂದು ಲಕ್ನೋ ಸೂಪರ್‌ ಜೈಂಟ್ಸ್‌, ಏಪ್ರಿಲ್‌ 15ರಂದು ಡೆಲ್ಲಿ ಕ್ಯಾಪಿಟಲ್ಸ್‌, ಏಪ್ರಿಲ್‌ 17ರಂದು ಚೆನ್ನೈ ಸೂಪರ್‌ ಕಿಂಗ್ಸ್‌, ಏಪ್ರಿಲ್‌ 20ರಂದು ಪಂಜಾಬ್‌ ಕಿಂಗ್ಸ್‌ ಹಾಗೂ ಏಪ್ರಿಲ್‌ 23ರಂದು ರಾಜಸ್ಥಾನ ರಾಯಲ್ಸ್‌ ತಂಡವನ್ನು ಎದುರಿಸಲಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಏಪ್ರಿಲ್‌ 26 ರಂದು ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ವಿರುದ್ಧ, ಮೇ 01 ರಂದು ಲಕ್ನೋ ಸೂಪರ್‌ ಜೈಂಟ್ಸ್‌, ಮೇ 06ರಂದು ಡೆಲ್ಲಿ ಕ್ಯಾಪಿಟಲ್ಸ್‌, ಮೇ 09ರಂದು ಮುಂಬೈ ಇಂಡಿಯನ್ಸ್‌, ಮೇ 14ರಂದು ರಾಜಸ್ಥಾನ ರಾಯಲ್ಸ್‌, ಮೇ 18ರಂದು ಸನ್‌ ರೈಸರ್ಸ್ ಹೈದರಬಾದ್‌, ಮೇ 21ರಂದು ಗುಜರಾತ್‌ ಟೈಟಾನ್ಸ್‌ ತಂಡವನ್ನು ಎದುರಿಸಲಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!