ವಿಟಿಯು ಪರೀಕ್ಷೆಯಲ್ಲಿ ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿಗೆ ಐದು ರ‍್ಯಾಂಕ್

ವಿಟಿಯು ಪರೀಕ್ಷೆಯಲ್ಲಿ ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿಗೆ ಐದು ರ‍್ಯಾಂಕ್

ಶಿವಮೊಗ್ಗ | 22 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2021-22 ನೇ ಸಾಲಿನ ಎಂಜಿನಿಯರಿಂಗ್‌, ಎಂ.ಟೆಕ್, ಎಂಬಿಎ, ಎಂಸಿಎ ವಿಭಾಗಗಳ ರ‍್ಯಾಂಕ್‌ ಪ್ರಕಟಗೊಂಡಿದೆ. ಶಿವಮೊಗ್ಗ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಐದು ರ‍್ಯಾಂಕ್‌ಗಳನ್ನು ಪಡೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಎಂ.ಟೆಕ್ ಸಿವಿಲ್ ಎಂಜಿನಿಯರಿಂಗ್ ವಿಭಾಗದ ‌ಟ್ರಾನ್ಸ್ ಪೋರ್ಟೇಷನ್ ಮ್ಯಾನೇಜ್‌ಮೆಂಟ್‌ ವಿಷಯದಲ್ಲಿ ರೂಪಾ.ಕೆ.ಆರ್ ಪ್ರಥಮ ರ‍್ಯಾಂಕ್‌ ಪಡೆದಿದ್ದಾರೆ. ಬಿ.ಇ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದಲ್ಲಿ ವಿದ್ಯಾರ್ಥಿನಿ ವಿದ್ಯಾಶ್ರೀ.ಆರ್ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್‌ ಪಡೆದಿದ್ದಾರೆ.

ಎಂ.ಟೆಕ್ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದಲ್ಲಿ ವಿದ್ಯಾರ್ಥಿನಿ ಇಂಪನಾ.ಆರ್ ಐದನೇ ರ‍್ಯಾಂಕ್‌ ಪಡೆದಿದ್ದಾರೆ. ಎಂ.ಬಿ.ಎ ವಿಭಾಗದಲ್ಲಿ ವಿದ್ಯಾ.ಎಂ.ಪಿ ಆರನೇ ರ‍್ಯಾಂಕ್‌ ಹಾಗೂ ಎಂ.ಸಿ.ಎ ವಿಭಾಗದಲ್ಲಿ ಉಮ್.ಇ.ಅಸ್ಮಾ ಒಂಬತ್ತನೇ ರ‍್ಯಾಂಕ್‌ ಪಡೆದಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2021-22 ನೇ ಸಾಲಿನ ಎಂಜಿನಿಯರಿಂಗ್‌, ಎಂ.ಟೆಕ್, ಎಂಬಿಎ, ಎಂಸಿಎ ವಿಭಾಗಗಳಲ್ಲಿ ರ‍್ಯಾಂಕ್‌ ಪಡೆದಿರುವ ಶಿವಮೊಗ್ಗ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು,  ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!