ಅಭಿರುಚಿ ಸಂಸ್ಥೆಯಿಂದ ಫೆಬ್ರವರಿ 24ಕ್ಕೆ ಶಿವಮೊಗ್ಗದಲ್ಲಿ “ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆ” ಜನಜಾಗೃತಿ, ಸಂವಾದ
ಶಿವಮೊಗ್ಗ | 22 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ
ಅಭಿರುಚಿ ವೇದಿಕೆ ಹಾಗೂ ಕುವೆಂಪು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಫೆಬ್ರವರಿ 24ರಂದು “ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆ” ವಿಷಯ ಕುರಿತು ಜನಜಾಗೃತಿ, ಕಾಲ್ನಡಿಗೆ ಜಾಥಾ ಮತ್ತು ಸಂವಾದ ಏರ್ಪಡಿಸಲಾಗಿದೆ ಎಂದು ಅಭಿರುಚಿ ವೇದಿಕೆ ಅಧ್ಯಕ್ಷ ಡಾ. ಎ.ಶಿವರಾಮಕೃಷ್ಣ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಅಭಿರುಚಿ ವೇದಿಕೆಯು ಭಾರತೀಯ ಸಾಂಸ್ಕೃತಿಕ, ಸಾಹಿತ್ಯ, ಕಲೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 19 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಇದೀಗ ಜಲ ಸಂರಕ್ಷಣೆ ಮಹತ್ವದ ಬಗ್ಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಭಿರುಚಿ ವೇದಿಕೆಯು ಸ್ವಚ್ಛ ಶಿವಮೊಗ್ಗ, ಸುಂದರ ನಗರ, ಅಭಿರುಚಿ ನಡಿಗೆ, ಸ್ವಚ್ಛತೆಯಡೆಗೆ ಯೋಜನೆಯಡಿಯಲ್ಲಿ ಕಾರ್ಯಕ್ರಮ ರೂಪಿಸಿದ್ದು, ಫೆಬ್ರವರಿ 24ರ ಬೆಳಗ್ಗೆ 9.30ಕ್ಕೆ ಬಿಎಚ್ ರಸ್ತೆಯ ಸರ್ಕಾರಿ ಬಾಲಿಕಾ ಪ್ರೌಢಶಾಲೆ ಆವರಣದಿಂದ ಕುವೆಂಪು ರಂಗಮಂದಿರದವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಚಾಲನೆ ನೀಡುವರು ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಕುವೆಂಪು ರಂಗಮಂದಿರದಲ್ಲಿ ಫೆಬ್ರವರಿ 24ರ ಬೆಳಗ್ಗೆ 10.30ಕ್ಕೆ ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆ ಸಂವಾದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಉದ್ಘಾಟಿಸುವರು. ಕುವೆಂಪು ವಿವಿ ಕುಲಸಚಿವ ಪ್ರೊ. ನವೀನ್‌ಕುಮಾರ್, ಅಭಿರುಚಿ ವೇದಿಕೆ ಗೌರವಾಧ್ಯಕ್ಷ ಡಾ. ಎ.ವೆಂಕಟರಾಜು ಉಪಸ್ಥಿತರಿರುವರು. ಜಲಸಂರಕ್ಷಣೆ ಕುರಿತು ರಾಜ್ಯ ಪ್ರಶಸ್ತಿ ಪುರಸ್ಕೃತ ಶಿವಾನಂದ ಕಳವೆ ವಿಶೇಷ ಉಪನ್ಯಾಸ ನೀಡುವರು ಎಂದು ಹೇಳಿದರು.
ಸಹ್ಯಾದ್ರಿ ವಿಜ್ಞಾನ ಕಾಲೇಜು ಪರಿಸರ ವಿಭಾಗದ ಡಾ. ನಾಗರಾಜ್ ಪರಿಸರ, ಪ್ರಮುಖರಾದ ಮಹಾದೇವಸ್ವಾಮಿ, ಕುಮಾರಶಾಸ್ತ್ರೀ, ಪ್ರಕಾಶಬಾಬು, ಅಭಿರುಚಿ ವೇದಿಕೆಯ ಪದಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu