ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ | 23 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ಭಾರತ ಸರ್ಕಾರ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುದ ಕೇಂದ್ರ  ಶಿವಮೊಗ್ಗ ವತಿಯಿಂದ 2022-23ನೇ ಸಾಲಿನ ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗೆ ಜಿಲ್ಲೆಯ 7 ತಾಲ್ಲೂಕುಗಳಲ್ಲಿ ತಾಲೂಕಿಗೆ ಇಬ್ಬರಂತೆ ಕೆಲಸ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಅರ್ಜಿ ಸಲ್ಲಿಸುವವರು ಎಸ್‍ಎಸ್‍ಎಲ್‍ಸಿ ಉತ್ತೀರ್ಣ ಆಗಿರಬೇಕು. 18 ರಿಂದ 29 ವರ್ಷದ ಒಳಗಿನವರಾಗಿರಬೇಕು. ಎನ್‍ಎಸ್‍ಎಸ್/ಎನ್‍ಸಿಸಿಯಲ್ಲಿ ಅನುಭವ ಇರುವ ಅಭ್ಯರ್ಥಿಗಳು ಹಾಗೂ ನೆಹರು ಯುವ ಕೇಂದ್ರದಲ್ಲಿ ನೊಂದಾಯಿತ ಯುವಕ/ಯುವತಿ ಸಂಘಗಳ ಸದಸ್ಯರುಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಪ್ರಸಕ್ತ ಸಾಲಿನಲ್ಲಿ ಓದುತ್ತಿರುವ ಕಾಲೇಜು ವಿದ್ಯಾರ್ಥಿಗಳು ಹಾಗೂ ಈಗಾಗಲೇ ಬೇರೆ ಕಡೆ  ಕೆಲಸ ಮಾಡುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತಿಲ್ಲ.  ಮಾಸಿಕ 5,000 ರೂ. ಗೌರವಧನ ನೀಡಲಾಗುವುದು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು www.nyks.nic.in   ವೆಬ್‍ಸೈಟ್ ನಲ್ಲಿ ಅಥವಾ ಜಿಲ್ಲಾ ಯುವ ಅಧಿಕಾರಿಗಳ ಕಚೇರಿ, ನೆಹರು ಯುವ ಕೇಂದ್ರ ಕಚೇರಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಮಾರ್ಚ್‌ 9 ಕಡೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 08182220883, 7975443499, 9961332968 ಸಂಪರ್ಕಿಸಬಹುದು ಎಂದು ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!