ಆಧುನಿಕ ಜೀವನಶೈಲಿಯಿಂದ ಮರೆವು ಹೆಚ್ಚು, ಸರ್ಜಿ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ ಡಾ. ಧನಂಜಯ ಸರ್ಜಿ

ಆಧುನಿಕ ಜೀವನಶೈಲಿಯಿಂದ ಮರೆವು ಹೆಚ್ಚು, ಸರ್ಜಿ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ ಡಾ. ಧನಂಜಯ ಸರ್ಜಿ

ಶಿವಮೊಗ್ಗ | 25 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ಮನುಷ್ಯನ ದೇಹಕ್ಕೆ ವಯಸ್ಸಾದಂತೆ ಮೆದುಳು ವರ್ಷದಿಂದ ವರ್ಷಕ್ಕೇ ಶೇ. 3 ರಿಂದ 5 ರಷ್ಟು ತನ್ನ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾ ಬರುತ್ತದೆ. ಇದರಿಂದ ಮರೆವು ಹೆಚ್ಚುತ್ತಾ ಹೋಗುತ್ತದೆ ಸರ್ಜಿ ಫೌಂಡೇಶನ್‌ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ ಸರ್ಜಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜು ಕ್ಯಾಂಪಸ್‌ನಲ್ಲಿ ಶನಿವಾರ ಪಾಥ್‌ವೇಸ್‌ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಮರೆವು ಎಂಬುದು ಇತ್ತೀಚಿನ ವರ್ಷಗಳಲ್ಲಿ ನಮ್ಮ ಜೀವನ ಶೈಲಿಯಿಂದ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಎಡಭಾಗದ ಮೆದುಳು ಓದಿಗೆ ಸಂಬಂಧಿಸಿ ಹಾಗೂ ಇತರೆ ಚಟುವಟಕೆಗಳನ್ನು ನಿರ್ವಹಿಸುತ್ತದೆ. ಬಲ ಭಾಗದ ಮೆದುಳು ಮನರಂಜನೆಗೆ ಸಂಬಂಧಿಸಿ ಚಟುವಟಿಕೆಗಳನ್ನು ಮಾಡುತ್ತದೆ ಎಂದು ತಿಳಿಸಿದರು.

ಒಂದು ರೀತಿಯಲ್ಲಿ ಮರೆವು ಎಂಬುದು ದೇವರು ಕೊಟ್ಟ ವರ ಎಂದೇ ಹೇಳಬಹುದು. ಯಾಕೆಂದರೆ ಜೀವನದಲ್ಲಿ ಅಹಿತರಕರ ಘಟನೆಗಳು, ಬೇಡವಾದ ವಿಷಯಗಳನ್ನು ನೆನಪಲ್ಲಿಟ್ಟುಕೊಂಡರೆ ಮನಸ್ಸು ಹಿತವಾಗಿರುವುದಿಲ್ಲ. ಆದ್ದರಿಂದ ಬೇಡವಾದ ವಿಷಯಗಳನ್ನು ಮರೆಯುವುದೇ ಒಳ್ಳೆಯದು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಮನುಷ್ಯನ ದೇಹವು ಭಗವಂತನಿಂದ ರಚಿಸಲ್ಪಟ್ಟಿದ್ದು, ಮೆದುಳು ಶ್ರೇಷ್ಠ ಅಂಗವಾಗಿದ್ದು, ಹಲವಾರು ವಿಶೇಷತೆಗಳನ್ನು ಹೊಂದಿರುವ ಮಾನವರಾದ ನಾವು ಬುದ್ದಿವಂತಿಕೆಯಿಂದ ಬೇರೆಲ್ಲಾ ಜೀವಿಗಳಿಗಿಂತಲೂ ಸರ್ವ ಶ್ರೇಷ್ಠರಾಗಿದ್ದೇವೆ. ನಮಗಿರುವ ಸಾಮರ್ಥ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಮೆದುಳಿನ ಬಗ್ಗೆ ಸಂಪೂರ್ಣ ವೈಜ್ಞಾನಿಕ ಮಾಹಿತಿ ನೀಡಿದರು.

ಸಹ್ಯಾದ್ರಿ ವಿಜ್ಞಾನ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ. ಎ.ಎಸ್‌.ಚಂದ್ರಶೇಖರ್‌ ಮಾತನಾಡಿ, ವಿದ್ಯೆಯೇ ಸರ್ವಸ್ವ, ವಿದ್ಯಾರ್ಥಿಗಳೇ ನಮ್ಮ ಮುಂದಿನ ಆಸ್ತಿ. ಸಮಯವನ್ನು ವ್ಯರ್ಥ ಮಾಡದೇ ಭವಿಷ್ಯದ ಬಗ್ಗೆ ಉನ್ನತ ಗುರಿ ಹೊಂದುವ ಮೂಲಕ ಯಶಸ್ಸು ಕಾಣುವಂತೆ ಸಲಹೆ ನೀಡಿದರು.

ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯೆ ಪ್ರೊ. ಎನ್‌ ರಾಜೇಶ್ವರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಪಾಥ್‌ ವೇಸ್‌ ಹಿರಿಯ ವಿದ್ಯಾರ್ಥಿ ಶಿವಕುಮಾರ್‌,  ನಿರ್ದೇಶಕ ಪ್ರೊ. ಸಿ.ಕೆ.ರಮೇಶ್‌, ಪ್ರೊ. ಎಂ ಕೆ ವೀಣಾ, ಪ್ರೊ. ಕೆ.ಬಿ.ಧನಂಜಯ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!