ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ವಿಶೇಷ ಸನ್ಮಾನ
ಶಿವಮೊಗ್ಗ | 27 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ
ಜಿಲ್ಲೆಯ ಜನರ ಬಹುನೀರಿಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣದ ಕನಸು ನನಸಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ಸ್ಮಾರ್ಟ್ ಸಿಟಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಉದ್ಘಾಟನೆ ನೆರವೇರಿಸಿದರು. ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ನಡೆಸಿಕೊಟ್ಟರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಶಿವಮೊಗ್ಗ ವಿಮಾನ ನಿಲ್ದಾಣ ಬಹುದಿನಗಳ ಬೇಡಿಕೆ ಆಗಿತ್ತು. ಇದೀಗ ವಿಮಾನ ನಿಲ್ದಾಣವು ಅತ್ಯಂತ ಸುಂದರವಾಗಿ ನಿರ್ಮಾಣಗೊಂಡಿದ್ದು, ವಿಮಾನ ನಿಲ್ದಾಣ ಜಿಲ್ಲೆಯ ಜನರ ಕನಸು ಸಾಕಾರಗೊಳಿಸಿಕೊಳ್ಳುವಲ್ಲಿ ನೆರವಾಗಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳು ಆಗುತ್ತಿದ್ದು, ರೈಲ್ವೇ, ರಸ್ತೆ, ವಿಮಾನ ಸೌಕರ್ಯ, ಡಿಜಿಟಲ್ ಕ್ಷೇತ್ರದಲ್ಲಿ ಮಹತ್ತರ ಪ್ರಗತಿ ಹೊಂದುತ್ತಿದೆ. ವಿಕಾಸದ ಹಾದಿಯನ್ನು ಚುರುಕಾಗಿಸಿದೆ. ಗ್ರಾಮೀಣ ಭಾಗಗಳಲ್ಲಿಯೂ ಉತ್ತಮ ಅಭಿವೃದ್ದಿ ಆಗುತ್ತಿದೆ ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಾಲು, ಅಡಕೆ ಹಾರ, ವಿಶೇಷ ಕೆಂಪು ಪೇಟ ತೊಡಿಸಿ ಸನ್ಮಾನಿಸಲಾಯಿತು. ಶಿವಮೊಗ್ಗ ವಿಮಾನ ನಿಲ್ದಾಣ ಮಾದರಿಯನ್ನು ಉಡುಗೊರೆಯಾಗಿ ನೀಡಲಾಯಿತು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸನ್ಮಾನಿಸಿ ಜನ್ಮದಿನದ ಶುಭಾಶಯ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು.
ಕೇಂದ್ರದ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ ಜೋಷಿ, ಶಾಸಕ ಕೆ.ಎಸ್.ಈಶ್ವರಪ್ಪ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಸಚಿವ ಆರಗ ಜ್ಞಾನೇಂದ್ರ, ಡಾ. ಕೆ.ಸಿ.ನಾರಾಯಣಗೌಡ, ಬಿ.ಎ.ಬಸವರಾಜ, ಸಿ.ಸಿ.ಪಾಟಿಲ್, ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಕೆ.ಬಿ.ಅಶೋಕನಾಯ್ಕ, ಹರತಾಳು ಹಾಲಪ್ಪ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಭಾರತಿ ಶೆಟ್ಟಿ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu