ಶಿವಮೊಗ್ಗದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ, ಮುಂದಿನ ಶೈಕ್ಷಣಿಕ ವರ್ಷದಿಂದಲೇ ಆರಂಭ

ಶಿವಮೊಗ್ಗದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ, ಮುಂದಿನ ಶೈಕ್ಷಣಿಕ ವರ್ಷದಿಂದಲೇ ಆರಂಭ

ಶಿವಮೊಗ್ಗ | 1 ಮಾರ್ಚ್‌ 2023 | ಡಿಜಿ ಮಲೆನಾಡು.ಕಾಂ

ಕರ್ನಾಟಕ ರಾಜ್ಯಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಮಂಜೂರಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಸೂಚಿಸಿದ್ದು, ಸಮಾಜ ಕಲ್ಯಾಣ ಇಲಾಖೆ ಕಟ್ಟಡದಲ್ಲಿ ಶೈಕ್ಷಣಿಕ ವರ್ಷದಲ್ಲಿ ವಿಶ್ವವಿದ್ಯಾಲಯ ಪ್ರಾರಂಭವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಜಿಲ್ಲಾಡಳಿತವು ನವುಲೆ ಸರ್ವೇ ನಂ 112ರಲ್ಲಿ 8 ಎಕರೆ ಜಾಗವನ್ನು ಗುರುತಿಸಿದ್ದು, ನೂತನ ವಿಶ್ವವಿದ್ಯಾಲಯದ ನಿರ್ಮಾಣ ಕಾರ್ಯ ಅನುದಾನ ಬಿಡುಗಡೆ ನಂತರ ಶುರುವಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗುಜರಾತ್‌ನಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಇದ್ದು, ಭೇಟಿ ನೀಡಿದ ವೇಳೆಯಲ್ಲಿ ಕರ್ನಾಟಕ ರಾಜ್ಯಕ್ಕೂ ಮಂಜೂರು ಮಾಡುವಂತೆ ಮನವಿ ಮಾಡಿದ್ದೆ. ದೇಶದಲ್ಲಿಯೇ ಎರಡನೇ ರಕ್ಷಾ ವಿಶ್ವವಿದ್ಯಾಲಯ ಆಗಿದ್ದು, ಶಿವಮೊಗ್ಗದಲ್ಲಿ ಸ್ಥಾಪನೆ ಆಗುತ್ತಿರುವುದು ಸಂತೋಷದ ಸಂಗತಿ ಎಂದರು.

ಲಭ್ಯವಿರುವ ಕೋರ್ಸ್‌ಗಳು: ಬೇಸಿಕ್ ಕೋರ್ಸ್ ಇನ್ ಕಾರ್ಪೊರೇಟ್ ಸೆಕ್ಯೂರಿಟಿ ಮ್ಯಾನೇಜ್‌ಮೆಂಟ್, ದೈಹಿಕ ಸಾಮರ್ಥ್ಯಕ್ಕೆ ಸಂಬಂಧಿಸಿ ಎರಡು ವಾರಗಳ ಸರ್ಟಿಫಿಕೇಟ್ ಕೋರ್ಸ್, ಡಿಪ್ಲೊಮಾ ಇನ್ ಕ್ರಿಮಿನಲ್ ಇನ್ವೆಸ್ಟಿಗೇಷನ್, ಡಿಪ್ಲೊಮಾ ಇನ್ ಪೊಲೀಸ್ ಸೈನ್ಸ್, ರೋಡ್ ಟ್ರಾಫಿಕ್ ಸೇಪ್ಟಿ ಮ್ಯಾನೇಜ್‌ಮೆಂಟ್, ಪಿಜಿ ಡಿಪ್ಲೊಮಾ ಇನ್ ಸೈಬರ್ ಸೆಕ್ಯೂರಿಟಿ ಅಂಡ್ ಸೈಬರ್ ಲಾ, ಪೋಸ್ಟ್ ಗ್ರಾಜುಯೇಶನ್ ಡಿಪ್ಲೊಮಾ ಇನ್ ಕೋಸ್ಟಲ್ ಸೆಕ್ಯುರಿಟಿ ಅಂಡ್ ಲಾ ಎನ್‌ಫೋರ್ಸ್‌ಮೆಂಟ್

ಗೃಹ ಇಲಾಖೆ, ಪೊಲೀಸ್‌ ಇಲಾಖೆ, ಸೇನೆಯಲ್ಲಿ ಕರ್ತವ್ಯ ನಿರ್ವಹಿಸಲು ಇಚ್ಚಿಸುವವರಿಗೆ ಅನುಕೂಲ ಆಗಲಿದೆ. ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪೂರೈಸುವವರಿಗೆ ಉದ್ಯೋಗ ಅವಕಾಶ ಹೆಚ್ಚಿದೆ. ಪ್ರವೇಶಾತಿ ಆರಂಭಕ್ಕೆ ಶೀಘ್ರ ಅಗತ್ಯ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಲಾಗುವುದು ಎಂದು ಹೇಳಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಸೇನೆ ಹಾಗೂ ಪೊಲೀಸ್ ಇಲಾಖೆಗೆ ಪೂರಕವಾದ ಕೋರ್ಸ್‌ಗಳ ಅಧ್ಯಯನ ನಡೆಸಬಹುದು. ಪಿಯು ಉತ್ತೀರ್ಣ ಆದವರು ಡಿಪ್ಲೊಮಾ ಹಾಗೂ ಪದವಿ ಶಿಕ್ಷಣ ಪಡೆಯಬಹುದು. ಪದವಿ ಪೂರೈಸಿದವರು ಸ್ನಾತಕೋತ್ತರ ಪದವಿ ಪಡೆಯಬಹುದು. ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಮುಖಾಂತರ ಹೊಸ ಉದ್ಯೋಗ ಅವಕಾಶಗಳು ದೊರೆಯಲಿವೆ ಎಂದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!