ಮಹಿಳಾ ಸಾಧಕಿಯರಿಗೆ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆಯಿಂದ ಸನ್ಮಾನ
ಶಿವಮೊಗ್ಗ | 3 ಮಾರ್ಚ್ 2023 | ಡಿಜಿ ಮಲೆನಾಡು.ಕಾಂ
ಕನಸು ಸಾಕಾರ ಮಾಡಿಕೊಳ್ಳಲು ಆತ್ಮವಿಶ್ವಾಸ ಹಾಗೂ ಶ್ರದ್ಧೆ, ಪರಿಶ್ರಮ ಅತ್ಯಂತ ಮುಖ್ಯ. ಉದ್ಯಮ ಸೇರಿದಂತೆ ಯಾವುದೇ ಕ್ಷೇತ್ರ ಆದರೂ ಯಶಸ್ವಿ ಆಗಲು ಸಮಯದ ನಿರ್ವಹಣೆ ಬಹಳ ಪ್ರಮುಖ ಎಂದು ಮಹಿಳಾ ಉದ್ಯಮಿ ಅಂಜಲಿ ಕಾತರಕಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ನಗರದ ಸರ್ಕಾರಿ ನೌಕರರ ಭವನದಲ್ಲಿ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರೂ ದಿನಚರಿ ನಿರ್ವಹಣೆ ಮಾಡಲು ಅಭ್ಯಾಸ ಮಾಡಿಕೊಳ್ಳಿ, ಪ್ರತಿ ನಿತ್ಯ ಅಂದುಕೊಂಡ ಕೆಲಸವನ್ನು ತಪ್ಪದೇ ಮಾಡಿ, ಇದರಿಂದ ಕಾರ್ಯಕ್ಷಮತೆ ವೃದ್ಧಿಸುತ್ತದೆ. ಬದುಕಿನ ಇಷ್ಟದ ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ಬದುಕಿನಲ್ಲಿ ಉನ್ನತ ಸ್ಥಾನ ಗಳಿಸುವ ಗುರಿ ತಲುಪಬಹುದು ಎಂದು ತಿಳಿಸಿದರು.
ಜೆಸಿಐ ಸಂಸ್ಥೆಯು ಜೀವನದ ಅತ್ಯಮೂಲ್ಯ ಸಂಗತಿಗಳನ್ನು ಕಲಿಸಿಕೊಡುತ್ತದೆ. ಉತ್ತಮ ವ್ಯಕ್ತಿತ್ವ ನಿರ್ಮಾಣ, ಸಂವಹನ ಕೌಶಲ್ಯ ಅನೇಕ ಸಂಗತಿಗಳನ್ನು ಅರಿತುಕೊಳ್ಳಲು ನೆರವಾಗುತ್ತದೆ. ಜೆಸಿಐ ಸಂಸ್ಥೆ ಕಲಿಸುವ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ಮಾತನಾಡಿ, ಮಹಿಳೆಯರು ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಅವರಿಗೆ ಮತ್ತಷ್ಟು ಬೆಂಬಲ ಹಾಗೂ ಪ್ರೋತ್ಸಾಹ ನೀಡುವ ಅಗತ್ಯವಿದೆ. ಮಹಿಳಾ ದಿನಾಚರಣೆ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದು ಹೇಳಿದರು.
ನಮ್ಮ ಸಂಸ್ಥೆ ವತಿಯಿಂದ ಪ್ರಸ್ತಕ ಸಾಲಿನ ಅನೇಕ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡಿದ್ದು, ಶಿಕ್ಷಣ ಮತ್ತು ಆರೊಗ್ಯ ಕ್ಷೇತ್ರದ ಸೇವಾ ಚಟುವಟಿಕೆಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಜಾಗೃತಿ ಶಿಬಿರಗಳನ್ನು ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳಾ ಸಾಧಕಿಯರಾದ ಕೆರೆಕೊಪ್ಪ ಭಾಗೀರಥಿ, ಡಾ. ಕಾಂಚನ್ ಕುಲಕರ್ಣಿ, ರುಕ್ಮಿಣಿ ವೇದವ್ಯಾಸ್, ದೀಪಾ ಕುಬುಸದ್, ಬಿ.ಎಸ್.ಭಾಗೀರಥಿ ಅವರನ್ನು ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ದೀಪಾ ಕುಬುಸದ್ ಮಾತನಾಡಿ, ಸಾಧಕರನ್ನುಗುರುತಿಸಿ ಪ್ರೋತ್ಸಾಹ ನೀಡುವುದರಿಂದ ಇತರರಿಗೂ ಸ್ಫೂರ್ತಿ ಸಿಗುತ್ತದೆ. ನಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಿಸುತ್ತದೆ. ಇನ್ನೂ ಗುರುತಿಸದೇ ಉಳಿದಿರುವ ಮಹಿಳಾ ಸಾಧಕರಿದ್ದು, ಅವರನ್ನು ಗುರುತಿಸಿ ಗೌರವಿಸುವ ಕೆಲಸ ಆಗಬೇಕು ಎಂದು ಹೇಳಿದರು.
ವೈದ್ಯೆ ಡಾ. ಕಾಂಚನ್ ಕುಲಕರ್ಣಿ ಮಾತನಾಡಿ, ಆಧ್ಯಾತ್ಮಿಕ, ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ತಿಳಿಸಿದರು. ಇನ್ನುಳಿದ ಮಹಿಳಾ ಸಾಧಕರು ತಮ್ಮ ಕ್ಷೇತ್ರಗಳಲ್ಲಿನ ಸೇವೆಯ ಬಗ್ಗೆ ಅನಿಸಿಕೆ ಹಂಚಿಕೊಂಡರು. ಜೆಸಿಐ ಶಿವಮೊಗ್ಗ ಭಾವನಾ ನಿಕಟಪೂರ್ವ ಅಧ್ಯಕ್ಷೆ ಶಾರದಾ ಶೇಷಗಿರಿ ಗೌಡ, ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ಕಾರ್ಯದರ್ಶಿ ಕವಿತಾ ಜೋಯೀಸ್, ವಿಜಯಾ ಶಿವಕುಮಾರ್, ಕರಿಬಸಮ್ಮ, ಉಮಾ ಮೂರ್ತಿ, ವಂದನಾ, ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu