ಮಾರ್ಚ್ 9 ರಿಂದ ದ್ವಿತೀಯ ಪಿಯು ಪರೀಕ್ಷೆ, ಶಿವಮೊಗ್ಗ ಜಿಲ್ಲೆಯ 36 ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ
ಶಿವಮೊಗ್ಗ | 7 ಮಾರ್ಚ್ 2023 | ಡಿಜಿ ಮಲೆನಾಡು.ಕಾಂ
ರಾಜ್ಯದಲ್ಲಿ ಮಾರ್ಚ್ 9 ರಿಂದ ಪಿಯು ಪರೀಕ್ಷೆಗಳು ಆರಂಭವಾಗಲಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ. ಮಾರ್ಚ್ 9ರಿಂದ 29ರವರೆಗೆ ಶಿವಮೊಗ್ಗ ಜಿಲ್ಲೆಯ 36 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ನಡೆಯಲಿವೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ಜಿಲ್ಲೆಯಲ್ಲಿ ಪರೀಕ್ಷೆಗೆ ಒಟ್ಟು 18,970 ವಿದ್ಯಾರ್ಥಿಗಳು ಹಾಜರಾಗುತ್ತಿದ್ದು, 16,711 ವಿದ್ಯಾರ್ಥಿಗಳು, 1,451 ಪುನಃ ಬರೆಯುತ್ತಿರುವವರು ಮತ್ತು 808 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಶಿವಮೊಗ್ಗ 13, ಭದ್ರಾವತಿ 6, ತೀರ್ಥಹಳ್ಳಿ 3, ಹೊಸನಗರ 3, ಸಾಗರ 5, ಶಿಕಾರಿಪುರ 4 ಮತ್ತು ಸೊರಬದಲ್ಲಿ 2 ಸೇರಿ ಒಟ್ಟು 36 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಪ್ರಶ್ನೆ ಪತ್ರಿಕೆ ಸಾಗಾಟಕ್ಕೆ ತ್ರಿಸದಸ್ಯ ಸಮಿತಿ ನೇಮಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಬಂದೋಬಸ್ತ್ ನೀಡುವ ಬಗ್ಗೆ ಪೊಲೀಸ್ ಇಲಾಖೆಗೆ ಪತ್ರ ಬರೆಯಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu