ರಾಜ್ಯಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಶಿವಮೊಗ್ಗ ಕ್ರೀಡಾಪಟುಗಳ ಉತ್ತಮ ಸಾಧನೆ

ರಾಜ್ಯಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಶಿವಮೊಗ್ಗ ಕ್ರೀಡಾಪಟುಗಳ ಉತ್ತಮ ಸಾಧನೆ

ಶಿವಮೊಗ್ಗ | 7 ಮಾರ್ಚ್‌ 2023 | ಡಿಜಿ ಮಲೆನಾಡು.ಕಾಂ

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮೈಸೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಕ್ರೀಡಾ ಶಾಲೆ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಅಥ್ಲೆಟಿಕ್ ತರಬೇತುದಾರ ಬಾಳಪ್ಪ ಮಾನೆ ಮಾರ್ಗದರ್ಶನದಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟುಗಳು ಭಾಗವಹಿಸಿ ವಿವಿಧ ಕ್ರೀಡೆಗಳಲ್ಲಿ ಜಯಶಾಲಿ ಆಗಿದ್ದಾರೆ.

ಗೌತಮಿ ಗೌಡ ಎತ್ತರ ಜಿಗಿತದಲ್ಲಿ 1.58 ಸೆ.ಮೀ. ಎತ್ತರ ಜಿಗಿದು 6 ವರ್ಷ ಹಿಂದಿನ ದಾಖಲೆಯನ್ನು ಮುರಿದು ಪ್ರಥಮ ಸ್ಥಾನ ಗಳಿಸಿದ್ದಾರೆ. ಗೌರಾಂಗಿ ಗೌಡ 100 ಮೀ ಹರ್ಡಲ್ಸ್‌ನಲ್ಲಿ ಪ್ರಥಮ ಸ್ಥಾನ ಮತ್ತು ಲಕ್ಷ್ಮೀ.ಎಚ್.ಪಿ. 400 ಮೀ ಹಾಗೂ 600 ಮೀ ಓಟದಲ್ಲಿ ತೃತೀಯ ಸ್ಥಾನ ಗಳಿಸಿ ಜಿಲ್ಲೆಗೆ ಗೌರವ ತಂದುಕೊಟ್ಟಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಎಂ.ಟಿ. ಹಾಗೂ ಸಿಬ್ಬಂದಿವರ್ಗ ಶುಭ ಹಾರೈಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!