ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಶಿಲಾಮಯ ಗರ್ಭಗುಡಿ ಪುನರ್ ಪ್ರತಿಷ್ಠಾಪನೆ
ತೀರ್ಥಹಳ್ಳಿ | 9 ಮಾರ್ಚ್ 2023 | ಡಿಜಿ ಮಲೆನಾಡು.ಕಾಂ
ಪುರಾತನ, ಪ್ರಾಚೀನ ದೇವಸ್ಥಾನಗಳ ಸಂರಕ್ಷಣೆ ಮಾಡುವುದು ಹಾಗೂ ಪೂಜಾ ವಿಧಿ ವಿಧಾನಗಳು ನಿರಂತರವಾಗಿ ನಡೆಯುವಂತೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಭಗವಂತ ಪ್ರಸನ್ನವಾಗಿದ್ದರೆ ನಮ್ಮೆಲ್ಲರ ಶ್ರೇಯಸ್ಸು ಎಂದು ಶೃಂಗೇರಿ ಶಾರದಾಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು ಅಂಚೆ ವ್ಯಾಪ್ತಿಯ ಕೊಡಿಗೆಬೈಲು ದೇವಾಲೇಕೊಪ್ಪದಲ್ಲಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿಯ ಪುನರ್ ಪ್ರತಿಷ್ಠಾಪನಾ ಮತ್ತು ಮಹಾ ಕುಂಭಾಭಿಷೇಕ ಮಹೋತ್ಸವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಒಳ್ಳೆಯ ಕೆಲಸಗಳು ಮಾಡುವುದೇ ಧರ್ಮ, ಪಾಪದ ಕೆಲಸಗಳನ್ನು ಮಾಡಿದರೆ ಅಧರ್ಮ ಅನುಸರಿಸಿದಂತೆ ಆಗುತ್ತದೆ. ಧರ್ಮ ಅಧರ್ಮದ ಫಲಗಳು ನಮ್ಮ ಬದುಕಿನಲ್ಲಿ ಎದುರಾಗುತ್ತವೆ. ನಾವು ಮಾಡಿದ ಒಳ್ಳೆಯ ಕೆಲಸಗಳೇ ನಮಗೆ ಉತ್ತಮ ಫಲವನ್ನು ಸಿಗುವಂತೆ ಮಾಡುತ್ತವೆ. ಜೀವನದಲ್ಲಿ ಕಷ್ಟಕರ ಸನ್ನಿವೇಶದಿಂದ ಪಾರಾದ ಸಂದರ್ಭದಲ್ಲಿ ಅನುಭವಿಸುವ ಆಶ್ಚರ್ಯಕರ ಸಂಗತಿಯೇ ನಾವು ಮಾಡಿದ ಧರ್ಮಕಾರ್ಯಗಳ ಫಲ ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಇಂದು ಅತ್ಯಂತ ಸುಂದರವಾಗಿ ನಿರ್ಮಾಣಗೊಂಡಿದ್ದು, ಭಕ್ತರ ಫಲ ಸಿದ್ಧಿಸುವ ಧಾರ್ಮಿಕ ಕೇಂದ್ರವಾಗಿ ರೂಪುಗೊಂಡಿದೆ. ನಿರಂತರ ಪೂಜಾ ವಿಧಿ ವಿಧಾನಗಳು ನಡೆಯುವಂತೆ ಆಗಬೇಕು ಎಂದರು.
ಭಕ್ತಾಧಿಗಳಿಗೆ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಅನ್ನ ಸಂತರ್ಪಣೆಗೆ ವ್ಯವಸ್ಥೆ ಮಾಡಲಾಗಿತ್ತು. ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಜೀಣೋದ್ಧಾರ ಸಮಿತಿ ಹಾಗೂ ದೇವಾಲಯ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu