ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಸಲಹೆ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಶಿವಮೊಗ್ಗ | 14 ಮಾರ್ಚ್ 2023 | ಡಿಜಿ ಮಲೆನಾಡು.ಕಾಂ
ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವ ಬಗ್ಗೆ ಆಲೋಚನೆ ನಡೆಸಬೇಕು. ಆರ್ಥಿಕವಾಗಿ ಸದೃಢರಾಗಲು ಸಂಪೂರ್ಣ ಪ್ರಯತ್ನಿಸಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ನಗರದ ಸಾಯಿ ಗೃಹ ನಿರ್ಮಾಣ ಸಹಕಾರ ಸಂಘದ ಆವರಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸೆ ಹಾಗೂ ಸಾಯಿ ಗೃಹ ನಿರ್ಮಾಣ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಿಳೆಯರು ಅಡುಗೆ ಮನೆ ಗೆ ಸೀಮಿತರಾಗದೇ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕು. ತಂತ್ರಜ್ಞಾನದ ನೆರವಿನ ಜತೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅವಕಾಶವಿರುವ ಉದ್ಯೋಗಗಳನ್ನು ಆರಂಭಿಸಿ ಜೀವನದಲ್ಲಿ ಯಶಸ್ಸು ಗಳಿಸಬೇಕು ಎಂದು ತಿಳಿಸಿದರು.
ರೋಟರಿ ವಲಯ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಸರ್ಕಾರಗಳು ಮಹಿಳೆಯರಿಗೆ ಪ್ರೋತ್ಸಾಹಿಸುವ ದೃಷ್ಠಿಯಿಂದ ವಿವಿಧ ಆರ್ಥಿಕ ಯೋಜನೆಗಳ ಅನುಷ್ಠಾನ ಮಾಡುತ್ತಿದ್ದು, ಸೂಕ್ತ ಮಾರ್ಗದರ್ಶನ ತೆಗೆದುಕೊಂಡು ಯೋಜನೆಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿರುವ ರೋಟರಿ ಸಂಸ್ಥೆಗಳ ಕಾರ್ಯ ಅಭಿನಂದನೀಯ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಾಯಿ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಫಲಾನುಭವಿಗಳು ಅನಿಸಿಕೆಗಳನ್ನು ಹಂಚಿಕೊಂಡರು.
ಸಮುದಾಯ ಸೇವೆಗಳ ನಿರ್ದೇಶಕ ಎಸ್.ಗಣೇಶ್, ಕಾರ್ಯದರ್ಶಿ ಕುಮಾರಸ್ವಾಮಿ, ಜಿ.ವಿಜಯ್‌ಕುಮಾರ್, ಸಾಯಿಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕಿ ಶಶಿಕಲಾ, ವನಜಾಕ್ಷಿ, ರತ್ನಮ್ಮ ಹಾಗೂ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu