ಜೀವ ವೈವಿಧ್ಯತೆ ಸಂರಕ್ಷಿಸದಿದ್ದರೆ ಹವಮಾನ ವೈಪರೀತ್ಯ ನಿಶ್ಚಿತ, ಕುವೆಂಪು ವಿಶ್ವವಿದ್ಯಾಲಯದಲ್ಲಿ ವನ್ಯಜೀವಿ ಅಧ್ಯಯನ ಕಾರ್ಯಾಗಾರ

ಜೀವ ವೈವಿಧ್ಯತೆ ಸಂರಕ್ಷಿಸದಿದ್ದರೆ ಹವಮಾನ ವೈಪರೀತ್ಯ ನಿಶ್ಚಿತ, ಕುವೆಂಪು ವಿಶ್ವವಿದ್ಯಾಲಯದಲ್ಲಿ ವನ್ಯಜೀವಿ ಅಧ್ಯಯನ ಕಾರ್ಯಾಗಾರ

ಶಿವಮೊಗ್ಗ | 14 ಮಾರ್ಚ್‌ 2023 | ಡಿಜಿ ಮಲೆನಾಡು.ಕಾಂ

ಜೀವವೈವಿಧ್ಯತೆಯ ಸಂರಕ್ಷಣೆ ಮತ್ತು ಅಭಿವೃದ್ಧಿ ಚಟುವಟಿಕೆಗಳ ನಡುವೆ ಸಮತೋಲನ ಕಾಯ್ದುಕೊಳ್ಳದೆ ಹೋದರೆ ಮುಂದಿನ ದಿನಗಳಲ್ಲಿ ಹವಾಮಾನ ವೈಪರೀತ್ಯಗಳಂತಹ ಮಾನವ ನಿರ್ಮಿತ ದುರಂತಗಳನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ.ವೆಂಕಟೇಶ್ವರಲು ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ವನ್ಯಜೀವಿ ಅಧ್ಯಯನದ ಪ್ರಾಯೋಗಿಕ ತಂತ್ರಗಳ ಕುರಿತು ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

2021ರ ಅಂತ್ಯದ ವೇಳೆಗೆ ಭಾರತದ ಅರಣ್ಯ ವ್ಯಾಪ್ತಿ 2,261 ಚದರ ಕಿ.ಮೀ ಇದ್ದು, ಒಟ್ಟಾರೆ ಭೂಭಾಗದ ಶೇ. 24.62ರಷ್ಟಿದೆ ಎಂದು ಕೇಂದ್ರ ಸರ್ಕಾರದ ಪರಿಸರ ಸಚಿವಾಲಯ ಬಿಡುಗಡೆ ಮಾಡಿರುವ ಭಾರತೀಯ ಅರಣ್ಯ ಸಮೀಕ್ಷೆಯ ವರದಿ ತಿಳಿಸಿದೆ. ಆದರೆ ಸರ್ಕಾರಗಳು ನದಿ ಜೋಡಣೆ, ಬಹು ಉದ್ದೇಶಿತ ಬೃಹತ್ ಅಣೆಕಟ್ಟುಗಳ ನಿರ್ಮಾಣ, ಹೆದ್ದಾರಿಗಳು ಮತ್ತು ರೈಲ್ವೆ ಮಾರ್ಗಗಳ ನಿರ್ಮಾಣ, ಹೀಗೆ ಬೃಹತ್ ಯೋಜನೆಗಳ ಬಗೆಗೇ ಹೆಚ್ಚು ಆಸಕ್ತಿ ತೋರುತ್ತಿರುವುದರಿಂದ ಪರಿಸರ ಸಂರಕ್ಷಣೆಗೆ ವ್ಯತಿರಿಕ್ತವಾಗಿ ಪರಿಣಮಿಸುವ ಸಾಧ್ಯತೆ ಇದೆ ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಗುಲ್ಬರ್ಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಈ. ಟಿ. ಪುಟ್ಟಯ್ಯ, ವಿಭಾಗದ ಅಧ್ಯಕ್ಷ ಪ್ರೊ. ವಿಜಯಕುಮಾರ ಮಾತನಾಡಿದರು. ಬೆಂಗಳೂರಿನ ವೈಲ್ಡ್ ಸೋನಿಕ್ ಸಂಸ್ಥೆಯ ಅಭಿ ಮಂಡೇಲಾ, ಹೈದರಾಬಾದ್‌ನ ಪರಿಸರ ತಜ್ಞ ಸಚಿನ್ ಶ್ರೀಧರ ಕಾರ್ಯಾಗಾರ ನಡೆಸಿಕೊಟ್ಟರು.

ಕುವೆಂಪು ವಿವಿ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಪ್ರೊ. ಸಿ. ಗೀತಾ, ಪ್ರೊ. ನಾಗರಾಜ್, ದೂರಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಪ್ರೊ. ಮಹದೇವನ್, ಪ್ರೊ. ಬಿ. ತಿಪ್ಪೇಸ್ವಾಮಿ, ಡಾ. ಪ್ರಮೋದ್, ಡಾ. ಹರೀಶ್, ಡಾ. ರಾಘವೇಂದ್ರ ಗೌಡ, ಡಾ. ಸೌಮ್ಯ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!