ಅಡಕೆ ಕೃಷಿ ಸವಾಲುಗಳು, ಕೃಷಿ ಮತ್ತು ಮೌಲ್ಯವರ್ಧನೆ, ಸಿರಿಧಾನ್ಯಗಳ ಮಹತ್ವ ಮತ್ತು ಸಮಗ್ರ ಕೃಷಿ ಪದ್ಧತಿಗಳ ಕುರಿತು ವಿಚಾರಗೋಷ್ಠಿ, ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ಮೇಳ 2023
ಶಿವಮೊಗ್ಗ | 15 ಮಾರ್ಚ್ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ನವುಲೆಯಲ್ಲಿರುವ ಕೃಷಿ ಮಹಾವಿದ್ಯಾಲಯದಲ್ಲಿ ಮಾರ್ಚ್ 17ರಿಂದ 20ರವರೆಗೆ “ಕೃಷಿ ಮತ್ತು ತೋಟಗಾರಿಕೆ ಮೇಳ 2023” ಹಮ್ಮಿಕೊಂಡಿದ್ದು, ಮೂರು ವಿಶೇಷ ವಿಷಯಗಳ ಬಗ್ಗೆ ತಾಂತ್ರಿಕ ಸಮಾವೇಶ ಹಾಗೂ ವಿಚಾರಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಕುಲಪತಿ ಡಾ. ಆರ್.ಸಿ.ಜಗದೀಶ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಮಾರ್ಚ್ 17ರಂದು ಮಧ್ಯಾಹ್ನ 2.30ಕ್ಕೆ ತಾಂತ್ರಿಕ ಸಮಾವೇಶದಲ್ಲಿ ಅಡಕೆ ಬೇಸಾಯ ಪದ್ಧತಿಗಳು, ಅಡಕೆ ಬೆಳೆಯಲ್ಲಿ ಸಮಗ್ರ ಬೆಳೆ ಸಂರಕ್ಷಣೆ, ಬಹು ಬೆಳೆ ಪದ್ಧತಿ, ಮಾರುಕಟ್ಟೆ ಅವಕಾಶಗಳು ಮತ್ತು ಮೌಲ್ಯವರ್ಧನೆ ವಿಷಯಗಳ ಕುರಿತು ಹಾಗೂ ತೋಟಗಾರಿಕಾ ಇಲಾಖೆ ಯೋಜನೆಗಳ ವಿಷಯದ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದ ನಡೆಯಲಿದೆ ಎಂದು ತಿಳಿಸಿದರು.
ಮಾರ್ಚ್ 18ರಂದು ಮಧ್ಯಾಹ್ನ 2.30ಕ್ಕೆ ನಡೆಯಲಿರುವ ಸಮಾವೇಶದಲ್ಲಿ ಗೋಡಂಬಿ ಬೆಳೆಯ ಸಂಸ್ಕರಣೆ ಹಾಗೂ ಮೌಲ್ಯವರ್ಧನೆ, ಸಾಂಬಾರು ಬೆಳೆಗಳಲ್ಲಿ ಮೌಲ್ಯವರ್ಧನೆ, ಹಲಸು, ಬಾಳೆ ಹಾಗೂ ಅಡಕೆಯಲ್ಲಿ ಕೊಯ್ಲೋತ್ತರ ತಂತ್ರಜ್ಞಾನ ಹಾಗೂ ಮೌಲ್ಯವರ್ಧನೆ, ಕೃಷಿ ನವೋದ್ಯಮ ಮತ್ತು ಸೆಕೆಂಡರಿ ಕೃಷಿ, ಜೇನು ಕೃಷಿ ಮತ್ತು ಮೌಲ್ಯವರ್ಧನೆ, ತೋಟಗಾರಿಕೆ ನರ್ಸರಿ ಮತ್ತು ಮೌಲ್ಯವರ್ಧನೆ, ಕೃಷಿ ಇಲಾಖೆಯ ಕಾರ್ಯಕ್ರಮಗಳ ಕಿರುಪರಿಚಯದ ವಿಷಯದ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದ ಏರ್ಪಡಿಸಲಾಗಿದೆ ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಮಾರ್ಚ್ 19ರಂದು ಮಧ್ಯಾಹ್ನ 2.30ಕ್ಕೆ ಸಿರಿಧಾನ್ಯಗಳು ಆರೋಗ್ಯ ಮತ್ತು ಭವಿಷ್ಯದ ಬೆಳೆ, ಸಮಗ್ರ ಕೃಷಿ ಪದ್ಧತಿ, ಸುಸ್ಥಿರ ಆದಾಯಕ್ಕಾಗಿ ಸಮಗ್ರ ಕೃಷಿ ಪದ್ಧತಿಗಳು, ಸಿರಿಧಾನ್ಯಗಳ ಸಂರಕ್ಷಣೆ ಹಾಗೂ ಮೌಲ್ಯವರ್ಧನೆಯಲ್ಲಿ ರೈತ ಉತ್ಪಾದಕ ಸಂಸ್ಥೆಗಳ ಪಾತ್ರ ಮತ್ತು ಸಿರಿಧಾನ್ಯಗಳ ವೈವಿಧ್ಯತೆ ಮತ್ತು ಮಾರುಕಟ್ಟೆ ಅವಕಾಶಗಳು ವಿಷಯದ ಬಗ್ಗೆ ವಿಜ್ಞಾನಿಗಳು, ಪ್ರಗತಿಪರ ರೈತ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದ ನಡೆಯಲಿದೆ ಎಂದು ಹೇಳಿದರು.
ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ. ಹೇಮ್ಲಾನಾಯಕ್, ಸಂಶೋಧನಾ ನಿರ್ದೇಶಕ ಡಾ. ಮೃತ್ಯುಂಜಯ ಸಿ.ವಾಲಿ, ಡೀನ್ ಡಾ. ಬಿ.ಎಂ.ದುಶ್ಯಂತಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು. ಇದನ್ನೂ ಓದಿ : ಶಿವಮೊಗ್ಗದ ಕೃಷಿ ಮಹಾವಿದ್ಯಾಲಯದಲ್ಲಿ ಮಾರ್ಚ್ 17ರಿಂದ 20ರವರೆಗೆ “ಕೃಷಿ ಮತ್ತು ತೋಟಗಾರಿಕಾ ಮೇಳ 2023” : https://digimalenadu.com/2023/03/agriculture-mela-march-17-to-20-shivamogga/
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu