ಶಿವಶರಣೆ ಶ್ರೀ ಅಕ್ಕಮಹಾದೇವಿ ಪುತ್ಥಳಿ ಅನಾವರಣ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ ಭಾಗಿ

ಶಿವಶರಣೆ ಶ್ರೀ ಅಕ್ಕಮಹಾದೇವಿ ಪುತ್ಥಳಿ ಅನಾವರಣ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ ಭಾಗಿ

ಶಿವಮೊಗ್ಗ | 17 ಮಾರ್ಚ್‌ 2023 | ಡಿಜಿ ಮಲೆನಾಡು.ಕಾಂ

ಶಿಕಾರಿಪುರ ತಾಲೂಕಿನ ಉಡುತಡಿಯಲ್ಲಿ 65 ಅಡಿ ಎತ್ತರದ ಶಿವಶರಣೆ ಶ್ರೀ ಅಕ್ಕಮಹಾದೇವಿ ಭವ್ಯ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಶರಣೆ ಶ್ರೀ ಅಕ್ಕಮಹಾದೇವಿ ಭವ್ಯ ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಡುತಡಿಯ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಭೌತಿಕ ಕಟ್ಟಡ ನಿರ್ಮಾಣ ಹಾಗೂ ಅಗತ್ಯತೆಗಳಿಗೆ ಉನ್ನತ ಶಿಕ್ಷಣ ಇಲಾಖೆಯಿಂದ 10 ಕೋಟಿ ರೂ. ಹಾಗೂ ಶ್ರೀಕ್ಷೇತ್ರ ಶಿವನಪಾದ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

ಶಿಕಾರಿಪುರ ತಾಲೂಕಿನ ಶರಣ ಅಲ್ಲಮ ಪ್ರಭು ಜನ್ಮಸ್ಥಳವನ್ನು 5 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಕಾಯಕ ಸಮುದಾಯಗಳ ಜಾಗೃತಿ ಮೂಡಿಸಿದ ಪುಣ್ಯ ನೆಲ ಶಿಕಾರಿಪುರ ತಾಲೂಕು. ವಚನ ಕ್ರಾಂತಿಯಲ್ಲಿ ಮಹತ್ತರ ಪಾತ್ರ ವಹಿಸಿದ ಶರಣರ ನಾಡು ಶಿಕಾರಿಪುರ ಎಂದರು.

ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಶಿಕಾರಿಪುರ ಹಾಗೂ ನಾಡಿನ ಸಮಗ್ರ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಿದ ಹೆಮ್ಮೆ ನನಗಿದೆ. ಜನರ ಆಶೋತ್ತರಗಳಿಗೆ ಪೂರಕವಾಗಿ ಕಾರ್ಯನಿರ್ವಹಿಸಿದ್ದೇನೆ ಎಂದು ತಿಳಿಸಿದರು. ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿ, 29 ಎಕರೆ ಪ್ರದೇಶದಲ್ಲಿ ದೆಹಲಿ ಅಕ್ಷರಧಾಮದ ಮಾದರಿಯಲ್ಲಿ ಅಕ್ಕಮಹಾದೇವಿ ಕೋಟೆಯನ್ನು ಅಭಿವೃದ್ಧಿಪಡಿಸಲಾಗಿದೆ. ಸರ್ಕಾರ 69 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ ಎಂದರು.

ಬೆಕ್ಕಿನ ಕಲ್ಮಠ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಚಿವ ಭೈರತಿ ಬಸವರಾಜು, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಭಾರತಿಶೆಟ್ಟಿ, ಶಾಸಕ ಕುಮಾರ್ ಬಂಗಾರಪ್ಪ, ಮಾಜಿ ಸಚಿವೆ ಲೀಲಾದೇವಿ ಪ್ರಸಾದ್, ಮುಖಂಡರಾದ ವಿಜಯೇಂದ್ರ, ಎಚ್.ಟಿ.ಬಳಿಗಾರ್, ರೇಖಾಬಾಯಿ, ಕೆ.ಎಸ್.ಗುರುಮೂರ್ತಿ, ಕೆ.ರೇವಣಪ್ಪ, ಟಿ.ಡಿ.ಮೇಘರಾಜ್, ವೀರೇಂದ್ರ, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಜಿಪಂ ಸಿಇಒ ಎನ್.ಡಿ.ಪ್ರಕಾಶ್, ಎಸ್‌ಪಿ ಮಿಥುನ್‌ಕುಮಾರ್ ಉಪಸ್ಥಿತರಿದ್ದರು.

ಶಿವಶರಣೆ ಶ್ರೀ ಅಕ್ಕಮಹಾದೇವಿ 65 ಅಡಿ ಎತ್ತರದ ಭವ್ಯ ಪುತ್ಥಳಿ ವಿಡಿಯೋ ನೋಡಿ : https://www.facebook.com/reel/1253231095599092?mibextid=g57oyn&s=yWDuG2&fs=e

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!