ಲೋಕೋಪಯೋಗಿ ಭವನದ ಲೋಕಾರ್ಪಣೆ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾಗಿ

ಲೋಕೋಪಯೋಗಿ ಭವನದ ಲೋಕಾರ್ಪಣೆ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾಗಿ

ಶಿವಮೊಗ್ಗ | 18 ಮಾರ್ಚ್‌ 2023 | ಡಿಜಿ ಮಲೆನಾಡು.ಕಾಂ

ಲೋಕೋಪಯೋಗಿ ಇಲಾಖೆ ವತಿಯಿಂದ ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆ ಮಾರ್ಗದಲ್ಲಿ ನೂತನವಾಗಿ ನಿರ್ಮಿಸಿರುವ “ಲೋಕೋಪಯೋಗಿ ಭವನ”ದ ಉದ್ಘಾಟನೆಯನ್ನು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ನೆರವೇರಿಸಿ ಶುಭಕೋರಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಕಚೇರಿಗಳು ಒಂದೇ ಸೂರಿನಡಿ ಬರುವಂತೆ ಭವನ ನಿರ್ಮಾಣ ಮಾಡಲಾಗಿದ್ದು, 23.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಪ್ರಸ್ತುತ ಕಚೇರಿಗಳು ಬೇರೆ ಬೇರೆ ಸ್ಥಳಗಳಲ್ಲಿ ಮತ್ತು ಬಾಡಿಗೆ ಕಟ್ಟಡಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಮುಖ ಕಚೇರಿಗಳನ್ನು ಒಂದೇ ಕಟ್ಟಡದಲ್ಲಿ ಆರಂಭಿಸಲಾಗುವುದು.

ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್‌ ಕಚೇರಿ, ಅಧೀಕ್ಷಕ ಇಂಜಿನಿಯರ್‌ ಕಚೇರಿ, ರಾಷ್ಟ್ರೀಯ ಹೆದ್ದಾರಿ ವಿಭಾಗ ಕಚೇರಿ, ಗುಣ ಭರವಸೆ ಉಪವಿಭಾಗದ ಪ್ರಯೋಗಾಲಯ ಸೇರಿದಂತೆ ಪ್ರಮುಖ ಕಚೇರಿಗಳು ನೂತನವಾಗಿ ನಿರ್ಮಾಣಗೊಂಡಿರುವ ಲೋಕೋಪಯೋಗಿ ಭವನದಲ್ಲಿ ಕಚೇರಿ ಕಾರ್ಯ ಆರಂಭಿಸಲಿವೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಬಿ.ಟಿ.ಕಾಂತರಾಜು, ಅಧೀಕ್ಷಕ ಇಂಜಿನಿಯರ್ ಕೆ.ಜಿ.ಜಗದೀಶ್, ಕಾರ್ಯಪಾಲಕ ಇಂಜಿನಿಯರ್‌ ಸಂಪತ್ ಕುಮಾರ್ ಪಿಂಗ್ಳೆ, ಕಿರಣ್ ಎಸ್, ಅಧಿಕಾರಿಗಳು ಪಾಲ್ಗೊಂಡಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!