ಶಿವಮೊಗ್ಗ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದ ನರೇಂದ್ರ ಮೋದಿ, ಒಂದು ತಿಂಗಳ ಅಂತರದಲ್ಲಿ ಎರಡು ಬಾರಿ ಆಗಮನ
ಶಿವಮೊಗ್ಗ | 26 ಮಾರ್ಚ್ 2023 | ಡಿಜಿ ಮಲೆನಾಡು.ಕಾಂ
ದಾವಣಗೆರೆ ಕಾರ್ಯಕ್ರಮದ ನಂತರ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಭಾರತೀಯ ವಾಯುಪಡೆ ವಿಮಾನದಲ್ಲಿ ಶನಿವಾರ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದರು. ಒಂದು ತಿಂಗಳ ಅಂತರದಲ್ಲಿ ನರೇಂದ್ರ ಮೋದಿ ಅವರು ಎರಡು ಬಾರಿ ಶಿವಮೊಗ್ಗ ವಿಮಾಣ ನಿಲ್ದಾಣ ಭೇಟಿ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಪ್ರಧಾನಿ ನರೇಂದ್ರ ಮೋದಿ ಆಗಮನ ಹಾಗೂ ಶಿವಮೊಗ್ಗ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಮಾಡಲಿದ್ದ ಹಿನ್ನೆಲೆಯಲ್ಲಿ ವಿಮಾಣ ನಿಲ್ದಾಣ ವ್ಯಾಪ್ತಿಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ವಾಹನಗಳ ನಿಲುಗಡೆ ಹಾಗೂ ನಿಲ್ದಾಣದೊಳಗೆ ಪ್ರವೇಶ ನಿಷೇಧಿಸಲಾಗಿತ್ತು. ನೂರಾರು ಜನರು ಗೇಟ್ ಹೊರಭಾಗದಲ್ಲಿ ಜಮಾಯಿಸಿದ್ದರು.

ಶನಿವಾರ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ವಾಯುಪಡೆ ವಿಮಾನದಲ್ಲಿ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದರು. ನಂತರ ಹೆಲಿಕಾಪ್ಟರ್‌ನಲ್ಲಿ ವಿವಿಧ ಜಿಲ್ಲೆಗಳ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ವಾಯುಪಡೆ ವಿಮಾನವು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿತ್ತು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ದಾವಣಗೆರೆ ಕಾರ್ಯಕ್ರಮದ ನಂತರ ಶಿವಮೊಗ್ಗಕ್ಕೆ ಆಗಮಿಸಿದ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಹಾಗೂ ಗಣ್ಯರು ಸ್ವಾಗತಿಸಿದರು. ಶಾಸಕ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್ ಹಾಜರಿದ್ದರು.
ಫೆಬ್ರವರಿ 27ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ತಿಂಗಳ ಅವಧಿಯೊಳಗೆ ಎರಡನೇ ಬಾರಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
