ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸುವಂತಿಲ್ಲ, ಕಾರ್ಮಿಕ ಇಲಾಖೆಯಿಂದ ಸೂಚನೆ

ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸುವಂತಿಲ್ಲ, ಕಾರ್ಮಿಕ ಇಲಾಖೆಯಿಂದ ಸೂಚನೆ

ಶಿವಮೊಗ್ಗ | 28 ಮಾರ್ಚ್‌ 2023 | ಡಿಜಿ ಮಲೆನಾಡು.ಕಾಂ

ವಿಧಾನಸಭೆ ಚುನಾವಣೆಯ ಕಾರ್ಯ ಹಾಗೂ ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಮಕ್ಕಳನ್ನು ಚುನಾವಣಾ ಕಾರ್ಯದಲ್ಲಿ ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಶಿಸ್ತಿನ ಕ್ರಮ ಜರುಗಿಸಲಾಗುವುದು ಕಾರ್ಮಿಕ ಇಲಾಖೆ ಸೂಚಿಸಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಭಾರತ ಸರ್ಕಾರ ಹಾಗೂ ವಿಶ್ವ ಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆ 1992 ರ ಡಿಸೆಂಬರ್ 11 ರಂದು ಒಪ್ಪಿ ಅನುಮೋದಿಸಿದೆ. ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ(ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ) 2015 ರ ಅನ್ವಯ 18 ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣಿತವಾಗಿದೆ.

ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ 32 ಮತ್ತು 36 ರಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಮಕ್ಕಳು ಕಾರ್ಯ ನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಾಡುವ ಚಟುವಟಿಕೆಯಲ್ಲಿ ಭಾಗವಹಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಚುನಾವಣಾ ಕಾರ್ಯಗಳಲ್ಲಿ ರಾಜಕೀಯ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೋರಿದೆ. ಮಕ್ಕಳನ್ನು ಚುನಾವಣಾ ಕಾರ್ಯಗಳಲ್ಲಿ ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!