ಜೀವನವೆಂಬ ಕೊಡುಗೆ ಸಾರ್ಥಕಗೊಳಿಸಿ, ಎನ್ಇಎಸ್ ಅಮೃತ ಮಹೋತ್ಸವ ಉಪನ್ಯಾಸ ಸರಣಿ
ಶಿವಮೊಗ್ಗ | 31 ಮಾರ್ಚ್ 2023 | ಡಿಜಿ ಮಲೆನಾಡು.ಕಾಂ
ಜೀವನ ಎಂಬುದು ನಮಗೆ ಸಿಕ್ಕ ಅಮೂಲ್ಯವಾದ ಕೊಡುಗೆಯಾಗಿದ್ದು, ಬದುಕನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ವೈದ್ಯ ಡಾ. ತಿಮ್ಮಪ್ಪ ಹೆಗಡೆ ಅಭಿಪ್ರಾಯಪಟ್ಟರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತ ಮಹೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಉಪನ್ಯಾಸ ಸರಣಿ 11 ನೇ ಮಾಲಿಕೆಯಲ್ಲಿ ‘ಜೀವನ – ಒಂದು ಉಡುಗೊರೆ’ ವಿಷಯ ಕುರಿತು ಮಾತನಾಡಿ, ಬದುಕನ್ನು ಉಡುಗೊರೆಯಾಗಿ ಸ್ವೀಕರಿಸಿ, ಇಡೀ ಜಗತ್ತನ್ನು ಬದಲಾಯಿಸುತ್ತೇನೆ ಎಂಬ ಭ್ರಮೆ ಬೇಡ. ನನ್ನನ್ನು ನಾನು ಸದಾ ಬದಲಾಯಿಸಿಕೊಳ್ಳುತ್ತೇನೆ ಎಂಬ ಮುಕ್ತತೆ ಇರಬೇಕು ಎಂದು ತಿಳಿಸಿದರು.
ಧನಾತ್ಮಕ ಮಾನಸಿಕ ಶಕ್ತಿಯನ್ನು ಹೊಂದಿರುವ ವ್ಯಕ್ತಿ ದೈಹಿಕವಾಗಿ ಬಲವಾಗಿ ಇರದಿದ್ದರೂ ಪರಿಸ್ಥಿತಿಯನ್ನು ಎದುರಿಸುವ ಶಕ್ತಿಯನ್ನು ಹೊಂದಿರುತ್ತಾನೆ. ಮಾನವನ ಮೆದುಳು ಮಾತಿಗಿಂತ ಅನುಭವ ಆಧಾರಿತ ವಿಚಾರಗಳನ್ನು ಹೆಚ್ಚು ನೆನಪಿನಲ್ಲಿಟ್ಟುಕೊಳ್ಳುತ್ತದೆ. ಎಂತಹ ಅದ್ಭುತತೆಯನ್ನು ನಿರ್ಮಿಸುವ ಶಕ್ತಿ ಮಾನವನ ಮೆದುಳಿಗಿದೆ ಎಂದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸಿ.ಆರ್.ನಾಗರಾಜ, ಕಾರ್ಯದರ್ಶಿ ಎಸ್.ಎನ್. ನಾಗರಾಜ, ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎಚ್.ಸಿ.ಶಿವಕುಮಾರ್, ಮಧುರಾವ್, ಎನ್.ಟಿ.ನಾರಾಯಣರಾವ್, ನ್ಯಾಷನಲ್ ಫಾರ್ಮಸಿ ಕಾಲೇಜಿನ ಪ್ರಾಚಾರ್ಯ ಡಾ. ಜಿ.ನಾರಾಯಣಮೂರ್ತಿ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu