ಎಲ್ಲ ಅರ್ಹ ಮತದಾರರು ಕಡ್ಡಾಯ ಮತದಾನ ಮಾಡಲು ಜಿಲ್ಲಾಧಿಕಾರಿ ಮನವಿ

ಎಲ್ಲ ಅರ್ಹ ಮತದಾರರು ಕಡ್ಡಾಯ ಮತದಾನ ಮಾಡಲು ಜಿಲ್ಲಾಧಿಕಾರಿ ಮನವಿ

ಶಿವಮೊಗ್ಗ | 6 ಏಪ್ರಿಲ್ 2023 | ಡಿಜಿ ಮಲೆನಾಡು.ಕಾಂ

ರಾಜ್ಯದಲ್ಲಿ ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಬೂತ್‍ಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್‌.ಸೆಲ್ವಮಣಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಎಲ್ಲ ಅರ್ಹ ಮತದಾರರು ಮತದಾನದಲ್ಲಿ ಪಾಲ್ಗೊಳ್ಳುವ ಕುರಿತು ಜಾಗೃತಿ ಮೂಡಿಸಲು ಮಹಾನಗರ ಪಾಲಿಕೆಯಿಂದ ಪ್ರಮುಖ ರಸ್ತೆಗಳಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಿಳಘಟ್ಟದಲ್ಲಿ ವಿಕಲಚೇತನರು ನಿರ್ವಹಿಸುವ ಒಂದು ಮತಗಟ್ಟೆಯನ್ನು ಸ್ಥಾಪಿಸಿದ್ದು, 23 ಜನ ವಿಕಲಚೇತನರು ನಿರ್ವಹಣೆ ಮಾಡುವರು. ಎಲ್ಲ ಅರ್ಹ ಮತದಾರರು ಮತಗಟ್ಟೆಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವಿಕಲಚೇತನರು ತ್ರಿಚಕ್ರ ವಾಹನಗಳಲ್ಲಿ ಮಹಾನಗರ ಪಾಲಿಕೆ ಆವರಣದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಅಂಗವಿಕಲರ ಕಲ್ಯಾಣಾಧಿಕಾರಿ ಶಿಲ್ಪಾ ದೊಡ್ಮನಿ, ಸ್ವೀಪ್ ಅಧಿಕಾರಿ ನವೀದ್ ಹಾಗೂ ನೂರಾರು ಸಂಖ್ಯೆಯಲ್ಲಿ ವಿಕಲಚೇತನರು ಭಾಗವಹಿಸಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!