ಸಹಕಾರಿ ನಿರ್ವಹಣೆ ಡಿಪ್ಲೋಮಾ ತರಬೇತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ | 20 ಮೇ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗದ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಯು ಜುಲೈ 1 ರಿಂದ ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಪ್ರಾರಂಭಿಸಲಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಂದ ಮತ್ತು ಸಹಕಾರ ಸಂಘ, ಬ್ಯಾಂಕ್‍ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 31 ಕೊನೆ ದಿನಾಂಕ ಆಗಿದೆ.
ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು. ಖಾಸಗಿ ಅಭ್ಯರ್ಥಿಗಳಿಗೂ ಪ್ರವೇಶ ಪಡೆಯಲು ಅವಕಾಶ ಇರುತ್ತದೆ. ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಮಾಸಿಕ 500 ರೂ. ಹಾಗೂ ವಿಶೇಷ ತರಬೇತಿ ಅನ್ವಯ 30 ವರ್ಷದೊಳಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ 600 ರೂ. ಶಿಷ್ಯವೇತನ ನೀಡಲಾಗುತ್ತದೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಅರ್ಜಿಯನ್ನು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ವಿನೋಬನಗರ ಕಚೇರಿಯಲ್ಲಿ ಪಡೆಯಬಹುದಾಗಿದೆ. ಮಾಹಿತಿಗೆ ದೂರವಾಣಿ ಸಂಖ್ಯೆ 08182248873 ಹಾಗೂ 7022429440 ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಪ್ರಾಂಶುಪಾಲರು ತಿಳಿಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu