ಯುಪಿಎಸ್‌ಸಿ ಪರೀಕ್ಷೆಯಲ್ಲಿ ಶಿವಮೊಗ್ಗದ ಮೇಘನಾಗೆ 617ನೇ ರ‍್ಯಾಂಕ್
ಶಿವಮೊಗ್ಗ | 25 ಮೇ 2023 | ಡಿಜಿ ಮಲೆನಾಡು.ಕಾಂ
ಯುಪಿಎಸ್‌ಸಿ ಪರೀಕ್ಷೆಯಲ್ಲಿ ಶಿವಮೊಗ್ಗ ನಗರದ ಐ.ಎನ್.ಮೇಘನಾ ಅವರು 617ನೇ ರ‍್ಯಾಂಕ್ ಪಡೆದಿದ್ದಾರೆ. ಶಿವಮೊಗ್ಗದ ಮೇಘನಾ ಎರಡನೇ ಪ್ರಯತ್ನದಲ್ಲೇ 617ನೇ ರ‍್ಯಾಂಕ್ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi

ನಿವೃತ್ತ ಡಿಸಿಎಫ್, ಶಿವಮೊಗ್ಗ ನಿವಾಸಿ ಐ.ಎಂ.ನಾಗರಾಜ್ ಹಾಗೂ ನಮಿತಾ ಅವರ ಪುತ್ರಿ ಮೇಘನಾ, ಚಾಮರಾಜನಗರ ಜಿಲ್ಲೆ ಬಂಡೀಪುರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದು, ದಾವಣಗೆರೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಿವಮೊಗ್ಗ ಸಾಂದೀಪಿನಿಯಲ್ಲಿ ಪ್ರೌಢಶಿಕ್ಷಣ, ಪೇಸ್ ಕಾಲೇಜಿನಲ್ಲಿ ಪಿಯು ಶಿಕ್ಷಣ ಪಡೆದಿದ್ದರು.
ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೇಘನಾ ಅವರು ಕೆಮಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪೂರೈಸಿದ್ದಾರೆ. ನಂತರ ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಹೆಚ್ಚು ಗಮನ ವಹಿಸಿದ್ದರು. ಮೊದಲ ಪ್ರಯತ್ನದಲ್ಲಿ ಯಶಸ್ಸು ಸಿಗದಿದ್ದರೂ ಎರಡನೇ ಪ್ರಯತ್ನದಲ್ಲೇ ರ‍್ಯಾಂಕ್ ಪಡೆದಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಯುಪಿಎಸ್‌ಸಿ ಪರೀಕ್ಷೆಯಲ್ಲಿ ಶಿವಮೊಗ್ಗ ನಗರದ ಐ.ಎನ್.ಮೇಘನಾ ಅವರ ಸಾಧನೆಗೆ ಪೋಷಕರು ಹಾಗೂ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ.

ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
