ದಡಾರ ರೋಗದಿಂದ ರಕ್ಷಿಸಲು ಎಂ.ಆರ್. ಲಸಿಕಾರಣ ಶೇ. 100 ಪ್ರಗತಿ ಸಾಧಿಸಲು ಸೂಚನೆ
ಶಿವಮೊಗ್ಗ | 30 ಮೇ 2023 | ಡಿಜಿ ಮಲೆನಾಡು.ಕಾಂ
ಮಾರಕ ದಡಾರ ರುಬೆಲ್ಲಾ ರೋಗದಿಂದ ರಕ್ಷಿಸಲು ಎಲ್ಲ ಅರ್ಹ ಮಕ್ಕಳಿಗೆ ಎಂ.ಆರ್ ಲಸಿಕಾಕರಣ ಆಗಬೇಕು. ಸಮರ್ಪಕವಾಗಿ ಕಾರ್ಯ ನಿರ್ವಹಿಸಿ ಶೇ. 100 ಗುರಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ದಡಾರ ರುಬೆಲ್ಲಾ ನಿರ್ಮೂಲನಾ (ಎಂಆರ್ ಎಲಿಮಿನೇಷನ್)2023 ಕಾರ್ಯಕ್ರಮ ಹಾಗೂ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕ ಕುರಿತಾದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
2023 ರ ಡಿಸೆಂಬರ್ ಅಂತ್ಯದ ವೇಳೆಗೆ ದಡಾರ ರುಬೆಲ್ಲಾ ನಿರ್ಮೂಲನೆ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ. ಮಕ್ಕಳನ್ನು ಎಂ.ಆರ್.ವೈರಸ್ ಸೋಂಕಿನಿಂದ ಮುಕ್ತಗೊಳಿಸಿ ಅದರಿಂದ ಉಂಟಾಗುವ ಸಾವುಗಳನ್ನು ತಡೆಗಟ್ಟುವುದು ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ತಿಳಿಸಿದರು.
ಮನೆ ಮನೆ ಭೇಟಿ ನೀಡಿ 5 ವರ್ಷದ ಒಳಗಿನ ಮಕ್ಕಳನ್ನು ಗುರುತಿಸಿ ಲಸಿಕೆ ಪಡೆದಿರುವುದನ್ನು ಖಚಿತ ಪಡಿಸುವುದು. ಬಿಟ್ಟು ಹೋದ ಮಕ್ಕಳನ್ನು ಪತ್ತೆ ಹಚ್ಚುವುದು ಹಾಗೂ ಪೂರ್ಣ ಪ್ರಮಾಣದ ಲಸಿಕೆ ನೀಡಿ ಶೇ. 100 ಪ್ರಗತಿ ಸಾಧಿಸಬೇಕು. ಎಂಆರ್ ಕಾಯಿಲೆ ಇರುವ ಮಕ್ಕಳನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದರು.
ಜಿಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ಮಾತನಾಡಿ, ಬ್ಲಾಕ್‍ವಾರು ಕಡಿಮೆ ಲಸಿಕಾಕರಣ ಆಗಿರುವ ಕಡೆಗಳಲ್ಲಿ ಕೇಂದ್ರೀಕರಿಸಿ ತಾಲ್ಲೂಕು ವೈದ್ಯಾಧಿಕಾರಿಗಳು, ಸಿಡಿಪಿಓ, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಭೆ ನಡೆಸಿ, ಮನೆ ಮನೆ ಅಭಿಯಾನ ಕೈಗೊಂಡು ಶೇ.100 ಲಸಿಕಾಕರಣ ಆಗಬೇಕು ಎಂದು ಹೇಳಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಆರ್‍ಸಿಹೆಚ್‍ಓ ಅಧಿಕಾರಿ ಡಾ.ನಾಗರಾಜನಾಯ್ಕ್ ಮಾತನಾಡಿ, 5 ವರ್ಷದ ಒಳಗಿನ ಮಕ್ಕಳ ಮರಣಕ್ಕೆ ಸಂಬಂಧಿಸಿದ ಕಾಯಿಲೆಗಳಲ್ಲಿ ತೀವ್ರತರ ಅತಿಸಾರ ಬೇಧಿಯೂ ಒಂದು ಪ್ರಮುಖ ಕಾರಣವಾಗಿದೆ. ಪ್ರತಿ ವರ್ಷ ಮೇ ಅಥವಾ ಜೂನ್ ತಿಂಗಳಲ್ಲಿ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಮಾತನಾಡಿ, ಎಲ್ಲ ಅಂಗನವಾಡಿ, ಶಾಲೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಓಆರ್‍ಎಸ್ ಪೊಟ್ಟಣ ಸಿದ್ದಪಡಿಸಿ ಇಟ್ಟುಕೊಳ್ಳಬೇಕು. ಮನೆ ಮನೆಗೆ ತೆರಳಿ ಅತಿಸಾರ ಬೇಧಿ ನಿಯಂತ್ರಣದ ಬಗ್ಗೆ ಅರಿವು ಮೂಡಿಸಬೇಕು. 5 ವರ್ಷದೊಳಗಿನ ಮಕ್ಕಳಿರುವ ಮನೆಗಳಿಗೆ ತೆರಳಿ ಓಆರ್ ಎಸ್ ಪೊಟ್ಟಣ ನೀಡಬೇಕು. ಕೈತೊಳೆಯುವ ವಿಧಾನದ ಬಗ್ಗೆ ಎಲ್ಲೆಡೆ ಅರಿವು ಮೂಡಿಸಬೇಕು ಎಂದರು.
ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ಶಮಾ ಮಾತನಾಡಿ, ಕುಷ್ಟರೋಗ ಲಕ್ಷಣ ಕಂಡುಬಂದ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಚಿಕಿತ್ಸೆ ಪಡೆಯದ ಕುಷ್ಟರೋಗಿಗಳ ಮೂಗಿನ ದ್ರವದಿಂದ, ಉಸಿರಿನ ಮೂಲಕ ಆರೋಗ್ಯವಂತರಿಗೆ ಹರಡುತ್ತದೆ. ಆದ್ದರಿಂದ ಲಕ್ಷಣ ಕಂಡು ಬಂದ ತಕ್ಷಣ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿಕೊಳ್ಳಬೇಕು. ಈ ರೋಗವನ್ನು ಬಹು ಔಷಧಿ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಬಹುದು ಎಂದು ಹೇಳಿದರು.
ಜಿಲ್ಲೆಯಲ್ಲಿ 40 ಪ್ರಕರಣ ಪತ್ತೆಯಾಗಿದ್ದು, ಪ್ರಸಕ್ತ ಸಾಲಿನ ಈವರೆಗೆ 12 ಪ್ರಕರಣ ಪತ್ತೆಯಾಗಿದೆ. ಎಲ್ಲ ತಾಲ್ಲೂಕುಗಳಲ್ಲಿ ಅರಿವು ಕಾರ್ಯಕ್ರಮ, ಆರಂಭಿಕ ಪತ್ತೆ ಅಭಿಯಾನ, ರಾಷ್ಟ್ರೀಯ ಕುಷ್ಟರೋಗ ನಿವಾರಣಾ ಕಾರ್ಯಕ್ರಮ, ಐಇಸಿ ಮೂಲಕ ಕುಷ್ಟರೋಗ ನಿರ್ಮೂನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು,
ಕುಷ್ಟರೋಗ ಪತ್ತೆ ಹಚ್ಚು ಆಂದೋಲನ-2023 ಮತ್ತು ಕುಷ್ಟರೋಗ ಮುಕ್ತ ಭಾರತದ ಕಡೆಗೆ ಎಂಬ ಪೋಸ್ಟರ್‍ಗಳನ್ನು ಬಿಡುಗಡೆ ಮಾಡಲಾಯಿತು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮಲ್ಲಪ್ಪ, ಡಿಹೆಚ್‍ಓ ಡಾ. ರಾಜೇಶ್ ಸುರಗಿಹಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಸುರೇಶ್ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu