ಪಿಇಎಸ್ ಸಂಸ್ಥೆಯಲ್ಲಿ 650ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉದ್ಯೋಗ ಆಯ್ಕೆ ಪತ್ರಗಳ ವಿತರಣೆ
ಶಿವಮೊಗ್ಗ | 2 ಜೂನ್ 2023 | ಡಿಜಿ ಮಲೆನಾಡು.ಕಾಂ
ಬದಲಾಗುತ್ತಿರುವ ಮಾರುಕಟ್ಟೆ ಏರಿಳಿತ ಅರ್ಥ ಮಾಡಿಕೊಳ್ಳುವುದು ತುಂಬಾ ಮುಖ್ಯ. ಸಮಗ್ರ ಅಭಿವೃದ್ಧಿಯ ಕಡೆಗೆ ಗಮನ ಹರಿಸುವುದು ಜೀವನದಲ್ಲಿ ಮಹತ್ವದ್ದಾಗಿದೆ ಎಂದು ಶಾಂತಲಾ ಸ್ಪೆರೋಕಾಸ್ಟ್ ಉಪಾಧ್ಯಕ್ಷ ಡಿ.ಎಸ್.ಚಂದ್ರಶೇಖರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ನಗರದ ಪೆಸಿಟ್ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ಯಾಂಪಸ್ ನೇಮಕಾತಿ ಮೂಲಕ ಆಯ್ಕೆಯಾದ 2023 ಬ್ಯಾಚ್ ವಿದ್ಯಾರ್ಥಿಗಳಿಗೆ ಉದ್ಯೋಗ ಆಯ್ಕೆ ಪತ್ರಗಳನ್ನು ವಿತರಿಸಿ ಮಾತನಾಡಿದರು.
ಪಿಇಎಸ್ ಟ್ರಸ್ಟ್ ಟ್ರಸ್ಟಿ ಎಸ್. ವೈ.ಅರುಣಾದೇವಿ ಮಾತನಾಡಿ, ಉದ್ಯೋಗಕ್ಕೆ ಆಯ್ಕೆಯಾದ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳು ಸ್ಫೂರ್ತಿ ಪಡೆದು ಹೆಚ್ಚಿನ ಸಾಧನೆ ಮಾಡಬೇಕು. ಶಿವಮೊಗ್ಗ ಜಿಲ್ಲೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಸ್ಥಾಪನೆಯಾದ ಪಿಇಎಸ್ ಟ್ರಸ್ಟ್ ಹೊಸ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಿರುವುದು ಖುಷಿ ತಂದಿದೆ ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಪಿಇಎಸ್ ಟ್ರಸ್ಟ್ ಮುಖ್ಯ ಆಡಳಿತ ಸಂಯೋಜಕ ಡಾ. ನಾಗರಾಜ.ಆರ್, ಪಿಇಎಸ್ ಐಟಿಎಂ ಪ್ರಾಚಾರ್ಯ ಡಾ. ಚೈತನ್ಯಕುಮಾರ್.ಎಂ.ವಿ, ಪಿಇಎಸ್ ಐಎಎಂಎಸ್ ಪ್ರಾಚಾರ್ಯ ಅರುಣಾ.ಎ, ಪಿಇಎಸ್ ಪಾಲಿಟೆಕ್ನಿಕ್ ಪ್ರಾಚಾರ್ಯ ಪ್ರೊ. ಗೌತಮ್ ಜೆ ಕೆ, ಪಿಇಎಸ್ ಟ್ರಸ್ಟ್ ಕೆರಿಯರ್ ಡೆವೆಲಪಮೆಂಟ್ ಸೆಂಟರ್ ಮುಖ್ಯಸ್ಥ ಡಾ. ಪ್ರಸನ್ನಕುಮಾರ್. ಟಿ.ಎಂ. ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu