ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಂಸ್ಥಾಪಕರ ದಿನಾಚರಣೆ ಜೂನ್ 4ಕ್ಕೆ

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಂಸ್ಥಾಪಕರ ದಿನಾಚರಣೆ ಜೂನ್ 4ಕ್ಕೆ

ಶಿವಮೊಗ್ಗ | 2 ಜೂನ್ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ 60 ವರ್ಷ ಪೂರೈಸಿರುವ ಸಂಭ್ರಮದಲ್ಲಿದ್ದು, ಜೂನ್‌ 4 ರಂದು ಬೆಳಗ್ಗೆ 10.15ಕ್ಕೆ ಸಂಘದ ಕಚೇರಿಯಲ್ಲಿ  ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎನ್‌.ಗೋಪಿನಾಥ್‌ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಯ ಹೆಜ್ಜೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಮಹತ್ತರ ಪಾತ್ರ ವಹಿಸಿದೆ.  ವಾಣಿಜ್ಯೋದ್ಯಮಿ, ಕೈಗಾರಿಕಾ ಉದ್ಯಮಿ ಹಾಗೂ ವೃತ್ತಿಪರರಿಗೆ ಸಂಘದ ಕಾರ್ಯ ಚಟುವಟಿಕೆಗಳು ಪೂರಕವಾಗಿ ಅಭಿವೃದ್ದಿ ದಾರಿದೀಪವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮವನ್ನು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಅಧ್ಯಕ್ಷೆ ಬಿ.ವಿ.ಗೋಪಾಲ ರೆಡ್ಡಿ ಉದ್ಘಾಟಿಸುವರು. ಇದೇ ಸಂದರ್ಭದಲ್ಲಿ ವಾಣಿಜ್ಯ ಕ್ಷೇತ್ರದಲ್ಲಿ  ಸುದೀರ್ಘ ಸೇವೆ ಸಲ್ಲಿಸಿದ ಸಂಸ್ಥೆಯ ಗಣ್ಯ ವಾಣಿಜ್ಯೋದ್ಯಮಿಗಳಿಗೆ ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಗುವುದು ಎಂದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ರಾಘವೇಂದ್ರರಾವ್‌, ಡಿ.ಎಂ.ಶಂಕರಪ್ಪ, ಎ.ಎಂ.ಸುರೇಶ್‌ ಅವರಿಗೆ 2023ನೇ ಸಾಲಿನ ಹೆಮ್ಮೆಯ ವಾಣಿಜ್ಯೋದ್ಯಮಿ ಪ್ರಶಸ್ತಿ ನೀಡಲಾಗುವುದು. ಆರ್.ರಂಗಪ್ಪ ಅವರಿಗೆ ವಿಶೇಷ ಪುರಸ್ಕಾರ ನೀಡಲಾಗುವುದು. ಯೋಗಪಟು ಸವಿತಾ ಮಾಧವ್, ವಿ.ಕೆ ಜೈನ್‌ ಅವರಿಗೆ ವಿಶೇಷ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಉಪಾಧ್ಯಕ್ಷ ಬಿ. ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಸಹ ಕಾರ್ಯದೆರ್ಶಿ ಜಿ.ವಿಜಯಕುಮಾರ್, ನಿರ್ದೇಶಕರಾದ ಇ.ಪರಮೇಶ್ವರ, ಬಿ.ಆರ್. ಸಂತೋಷ್, ಪ್ರದೀಪ್ ವಿ. ಯಲಿ, ಬಿ.ಮಂಜೇಗೌಡ, ಮರಿಸ್ವಾಮಿ, ಗಣೇಶ ಎಂ. ಅಂಗಡಿ, ಎಂ.ಎ ರಮೇಶ್ ಹೆಗಡೆ, ಹಾಲಸ್ವಾಮಿ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!