ಚರ್ಮಗಂಟು ರೋಗಕ್ಕೆ ಲಸಿಕೆ ಹಾಕಿಸಿ, ಜಾನುವಾರು ರಕ್ಷಿಸಿ

ಚರ್ಮಗಂಟು ರೋಗಕ್ಕೆ ಲಸಿಕೆ ಹಾಕಿಸಿ, ಜಾನುವಾರು ರಕ್ಷಿಸಿ

ಶಿವಮೊಗ್ಗ | 8 ಜೂನ್ 2023 | ಡಿಜಿ ಮಲೆನಾಡು.ಕಾಂ

2023-24 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲಾದ್ಯಂತ ಎಲ್ಲ ಗ್ರಾಮಗಳಲ್ಲಿರುವ ದನಗಳಿಗೆ ಚರ್ಮಗಂಟು ರೋಗದ ವಿರುದ್ದ ಜೂನ್‌ 12 ರಿಂದ 30 ರವರೆಗೆ ಮೇಕೆ ಸಿಡುಬು(ಗೋಟ್ ಪಾಕ್ಸ್) ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಚರ್ಮಗಂಟು ರೋಗವು ಕ್ಯಾಪ್ರಿ ಫಾಕ್ಸ್ ವೈರಾಣುವಿನಿಂದ ಬರುವ ಸಾಂಕ್ರಾಮಿಕ ರೋಗವಾಗಿದ್ದು, ಮೇಕೆ ಸಿಡುಬು ಲಸಿಕೆಯಿಂದ ತಡೆಗಟ್ಟಬಹುದಾಗಿದೆ. 2022-23 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ರೋಗೋದ್ರೇಕವು ಹೆಚ್ಚಾಗಿ ಮಳೆಗಾಲ ಮುಕ್ತಾಯವಾದ ಕೂಡಲೇ ಕಂಡುಬಂದಿದೆ.

ಪ್ರಸ್ತುತ ಮಳೆಗಾಲ ಪ್ರಾರಂಭವಾಗುತ್ತಿದ್ದು, ಮಳೆಗಾಲದಲ್ಲಿ ಹೆಚ್ಚಾಗುವ ಸೊಳ್ಳೆ, ನೊಣ ಹಾಗೂ ಕೀಟಗಳ ಕಡಿತದಿಂದ ರೋಗವು ಜಾನುವಾರುವಿನಿಂದ ಜಾನುವಾರುವಿಗೆ ಹರಡುವುದರಿಂದ ಮುಂಜಾಗ್ರತಾ ಕ್ರಮವಾಗಿ ರೋಗದ ವಿರುದ್ದ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯನ್ನು ತಾಲ್ಲೂಕು, ಗ್ರಾಮವಾರು ತಯಾರಿಸಲಾಗಿದೆ. ಪಶುಪಾಲನಾ ಇಲಾಖೆಯ ಅಧಿಕಾರಿ, ಸಿಬ್ಬಂದಿ ಒಳಗೊಂಡ ಲಸಿಕಾ ತಂಡಗಳು ವೇಳಾಪಟ್ಟಿಯಂತೆ ಆಯಾ ಗ್ರಾಮಗಳಿಗೆ ಭೇಟಿ ನೀಡಿ ದನಗಳಿಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುವುದು. ಹೆಚ್ಚಿನ ಮಾಹಿತಿಗೆ ಸಮೀಪದ ಪಶು ಚಿಕಿತ್ಸಾ ಸಂಸ್ಥೆಗಳನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಿವಯೋಗಿ ಬಿ ಯಲಿ ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!