ಒತ್ತಡದ ಜೀವನಶೈಲಿಯಿಂದ ಆರೋಗ್ಯ ಸಮಸ್ಯೆ, ಸದೃಢ ಆರೋಗ್ಯಕ್ಕೆ ಜಾಗೃತಿ ವಹಿಸುವುದು ತುಂಬಾ ಮುಖ್ಯ
ಶಿವಮೊಗ್ಗ | 9 ಜೂನ್ 2023 | ಡಿಜಿ ಮಲೆನಾಡು.ಕಾಂ
ಒತ್ತಡದ ಜೀವನಶೈಲಿಯಲ್ಲಿ ಆರೋಗ್ಯದ ನಿರ್ಲಕ್ಷ್ಯ ಮಾಡಬಾರದು. ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಜಾಗೃತಿ ವಹಿಸುವುದು ಅತ್ಯಂತ ಮುಖ್ಯ ಎಂದು ಡಿವೈಎಸ್‌ಪಿ ಬಾಲರಾಜ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಐಲೆಟ್ಸ್ ಡಯಾಬಿಟಿಕ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಸಮಗ್ರ ಡಯಾಬಿಟಿಸ್ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ, ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಉತ್ತಮ ಜೀವನಶೈಲಿ ರೂಢಿಸಿಕೊಳ್ಳಬೇಕು. ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಬೇಕು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಕಂದಾಯ ಅಧಿಕಾರಿ ನಾಗೇಂದ್ರ ಮಾತನಾಡಿ, ಸಾರ್ವಜನಿಕರು ಆರೋಗ್ಯ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು. ಶಿಬಿರಗಳಲ್ಲಿ ಭಾಗವಹಿಸುವುದರಿಂದ ಆರೋಗ್ಯ ಜಾಗೃತಿ ಮೂಡುತ್ತದೆ ಎಂದರು.
ಐಲೆಟ್ಸ್ ಡಯಾಬಿಟಿಕ್ ಆಸ್ಪತ್ರೆಯ ಎಂಡಿ ಡಾ. ಪ್ರೀತಂ ಬಿ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಡಯಾಬಿಟಿಸ್ ರೋಗಿಗಳಿಗೆ ಉಪಯುಕ್ತ ಆಗುವ ವಿಶೇಷ ಆಹಾರ ಕಿಟ್ ಸಿದ್ಧಪಡಿಸಿದ್ದು, 500 ರೂ.ಗೆ ದೊರೆಯಲಿದೆ. 300 ರೂ. ವಾರ್ಷಿಕ ಹೆಲ್ತ್ ಕಾರ್ಡ್ ಮಾಡಿಸುವುದರಿಂದ ಸಮಾಲೋಚನೆ ಸಂದರ್ಭಗಳಲ್ಲಿ ಶೇ. 50 ರೀಯಾಯಿತಿ ಸಿಗಲಿದೆ ಎಂದು ಹೇಳಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಮಣಿಪಾಲ್ ಆಸ್ಪತ್ರೆ ಬೆಂಗಳೂರು ವಾಸ್ಕ್ಯುಲರ್ ಸರ್ಜನ್ ಡಾ. ರಾಹುಲ್ ಎನ್.ಎಸ್. ಪ್ರತಿ ತಿಂಗಳ ಒಂದು ದಿನ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಮಣಿಪಾಲ್ ಆಸ್ಪತ್ರೆ ಬೆಂಗಳೂರು ವಾಸ್ಕ್ಯುಲರ್ ಸರ್ಜನ್ ಡಾ. ರಾಹುಲ್ ಎನ್.ಎಸ್. ಹಾಗೂ ಡಾ. ಪಲ್ಲವಿ ಆರ್.ಬಿ. ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu