ರಾಷ್ಟ್ರೀಯ ಶಿಕ್ಷಣ ಸಮಿತಿ ಅಮೃತ ಮಹೋತ್ಸವ ಕಾರ್ಯಕ್ರಮ ಜೂನ್‌ 20, 21ಕ್ಕೆ, ಪದ್ಮವಿಭೂಷಣ ಡಾ. ವೀರೇಂದ್ರ ಹೆಗ್ಗಡೆ, ನಟ ವಸಿಷ್ಠ ಸಿಂಹ ಭಾಗಿ

ರಾಷ್ಟ್ರೀಯ ಶಿಕ್ಷಣ ಸಮಿತಿ ಅಮೃತ ಮಹೋತ್ಸವ ಕಾರ್ಯಕ್ರಮ ಜೂನ್‌ 20, 21ಕ್ಕೆ, ಪದ್ಮವಿಭೂಷಣ ಡಾ. ವೀರೇಂದ್ರ ಹೆಗ್ಗಡೆ, ನಟ ವಸಿಷ್ಠ ಸಿಂಹ ಭಾಗಿ

ಶಿವಮೊಗ್ಗ | 15 ಜೂನ್ 2023 | ಡಿಜಿ ಮಲೆನಾಡು.ಕಾಂ

ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತ ಮಹೋತ್ಸವದ ವೈಶಿಷ್ಠ್ಯಪೂರ್ಣ ಕಾರ್ಯಕ್ರಮಗಳನ್ನು ಶಿವಮೊಗ್ಗ ನಗರದ ಎನ್‌ಇಎಸ್‌ ಮೈದಾನದಲ್ಲಿ ಜೂನ್‌ 20 ಹಾಗೂ 21ರಂದು ಹಮ್ಮಿಕೊಳ್ಳಲಾಗಿದೆ. ಪ್ರತಿಭಾ ಪುರಸ್ಕಾರ, ಮಲೆನಾಡು ವಸ್ತು ಪ್ರದರ್ಶನ, ಸಾಂಸ್ಕೃತಿಕ ಸೌರಭದಲ್ಲಿ ನೃತ್ಯ, ಸಂಗೀತ, ಜಾನಪದ, ಮಿಮಿಕ್ರಿ, ಗಮಕ ಸೇರಿದಂತೆ ಆಕರ್ಷಕ ಪ್ರದರ್ಶನಗಳು ನಡೆಯಲಿವೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್‌ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಎರಡು ದಿನಗಳ ಅಮೃತ ಮಹೋತ್ಸವ ಸಂಭ್ರಮ ಎನ್‌ಇಎಸ್‌ ಹಬ್ಬ ಹೆಸರಿನಲ್ಲಿ ನಡೆಯಲಿದ್ದು, ಜೂನ್‌ 20 ರಂದು ಬೆಳಗ್ಗೆ 10ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸುವರು. ಭಾಷಣಕಾರ ಗಂಗಾವತಿ ಪ್ರಾಣೇಶ್‌  ಅವರು “ಜೀವನವೇ ಹಾಸ್ಯ” ವಿಷಯ ಕುರಿತು ವಿಶೇಷ ಹಾಸ್ಯ ಲಹರಿ ನಡೆಸಿಕೊಡುವರು. ಜೂನ್‌ 21ರಂದು ಬೆಳಗ್ಗೆ 9.30ಕ್ಕೆ ಪದ್ಮವಿಭೂಷಣ, ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಸಮಾರೋಪ ಭಾಷಣ ಮಾಡುವರು ಎಂದು ತಿಳಿಸಿದರು.

ನಟ ವಸಿಷ್ಠ ಸಿಂಹ ಭಾಗಿ : ಜೂನ್‌ 20ರ ಮಧ್ಯಾಹ್ನ 3ಕ್ಕೆ ನಡೆಯುವ ಎನ್‌ಇಎಸ್‌ ಹಬ್ಬದ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ನಟ ವಸಿಷ್ಠ ಸಿಂಹ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾಗಿರುವ ಶಿವಮೊಗ್ಗ ನಗರಸಭೆ ಕ್ಷೇತ್ರದ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಅವರನ್ನು ಸನ್ಮಾನಿಸಲಾಗುವುದು. ನೃತ್ಯ, ಸಂಗೀತ, ನಾಟಕ, ಜಾನಪದ, ಮಿಮಿಕ್ರಿ, ಮ್ಯಾಜಿಕ್‌ ಶೋ ಪ್ರದರ್ಶನಗಳು ಸಾಂಸ್ಕೃತಿಕ ವೇದಿಕೆಯಲ್ಲಿ ನಡೆಯಲಿದೆ ಎಂದು ಎನ್‌ಇಎಸ್‌ ಕಾರ್ಯದರ್ಶಿ ಎಸ್‌.ಎನ್‌.ನಾಗರಾಜ್‌ ಮಾಹಿತಿ ನೀಡಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಡಾ. ಪಿ.ನಾರಾಯಣ ಮಾತನಾಡಿ, ಅಮೃತ ಮಹೋತ್ಸವದ ವಿಶೇಷ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಜೂನ್‌ 17ರಂದು ಎಂಟು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಶಿವಮೊಗ್ಗ ನಗರಾದ್ಯಂತ ಪ್ರಮುಖ ರಸ್ತೆಗಳಲ್ಲಿ “ಅಮೃತ ನಡಿಗೆ” ಆಯೋಜಿಸಲಾಗಿದೆ. ಜೂನ್‌ 21ರ ಬೆಳಗ್ಗೆ 6ಕ್ಕೆ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಉಪಸ್ಥಿತಿಯಲ್ಲಿ ಯೋಗ ಕಾರ್ಯಕ್ರಮ ಜರುಗಲಿದೆ. ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿಯ ರಮೇಶ್‌, ಟಿ.ಆರ್.ಅಶ್ವತ್ಥ್ ನಾರಾಯಣಶೆಟ್ಟಿ, ನಾರಾಯಣರಾವ್‌, ಮಧುರಾವ್‌, ಸುಧೀರ್‌, ಶಿವಕುಮಾರ್‌, ರಾಮಚಂದ್ರಮೂರ್ತಿ, ಅನಂತದತ್ತ, ಸೀತಾಲಕ್ಷ್ಮೀ, ರಾಮಚಂದ್ರ, ಹರಿಯಪ್ಪ, ನೃಪತುಂಗ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!