ಜ್ಞಾನದೀಪ ಶಾಲೆಯಲ್ಲಿ ನೂತನ ವಿದ್ಯಾರ್ಥಿ ಸಂಸತ್ ಉದ್ಘಾಟನೆ
ಶಿವಮೊಗ್ಗ | 17 ಜೂನ್ 2023 | ಡಿಜಿ ಮಲೆನಾಡು.ಕಾಂ
ಸದೃಢ ರಾಷ್ಟ್ರ ನಿರ್ಮಾಣ ಮಾಡುವ ಮನೋಭಾವವನ್ನು ಮಕ್ಕಳಲ್ಲಿ ಬೆಳೆಸುವ ಜತೆಯಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಜ್ಞಾನದೀಪ ಶಾಲೆ ಕೈಗೊಳ್ಳುತ್ತಿದೆ. ಜ್ಞಾನ ಮತ್ತು ಕೌಶಲ್ಯ ಮಕ್ಕಳ ಬದುಕಿನಲ್ಲಿ ತುಂಬಾ ಮುಖ್ಯ. ನಾಯಕತ್ವಗುಣಗಳನ್ನು ಬೆಳೆಸುವ ದಿಸೆಯಲ್ಲಿ ಚಟುವಟಿಕೆ ನಡೆಸಬೇಕು ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಜಾವಳ್ಳಿಯ ಜ್ಞಾನದೀಪ ಶಾಲೆಯಲ್ಲಿ ಆಯೋಜಿಸಿದ್ದ ಶೈಕ್ಷಣಿಕ ವರ್ಷದ ಸಹಪಠ್ಯ ಚಟುವಟಿಕೆ ಆರಂಭ, ಶಾಲಾ ವಿದ್ಯಾರ್ಥಿ ಸಂಸತ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದರು. ಜ್ಞಾನದೀಪ ಶಾಲೆ ಬೆಳ್ಳಿ ಹಬ್ಬ ವರ್ಷ ಆಚರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಮಕ್ಕಳಲ್ಲಿ ರಾಜಕೀಯ ಪ್ರಜ್ಞೆ ಮೂಡಿಸುವ ದೃಷ್ಟಿಯಿಂದ ಶಾಲಾ ವಿದ್ಯಾರ್ಥಿ ಸಂಸತ್ ಮಾಡಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ ಮಾತನಾಡಿ, ಶಾಲಾ ವಿದ್ಯಾರ್ಥಿ ಸಂಸತ್ ಗೆ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಶಾಲೆಗಳಲ್ಲಿ ಮಕ್ಕಳಿಗೆ ಸಹಪಠ್ಯ ಚಟುವಟಿಕೆಗಳ ಮೂಲಕ ಹಾಗೂ ನೀತಿಕಥೆಗಳ ಮೂಲಕ ಮೌಲ್ಯಗಳನ್ನು ಬೆಳೆಸಬೇಕು ಎಂದು ಹೇಳಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಜ್ಞಾನದೀಪ ಸೀನಿಯರ್ ಸೆಕೆಂಡರಿ ಶಾಲೆಯ ಪ್ರಾಚಾರ್ಯ ಶ್ರೀಕಾಂತ್ ಎಂ.ಹೆಗ್ಡೆ ಮಾತನಾಡಿ, ಮಕ್ಕಳ ವ್ಯಕ್ತಿತ್ವದ ವಿಕಸನಕ್ಕೆ ಸಹಭಾಗಿತ್ವದ ಕಲಿಕೆ ಅತ್ಯಂತ ಮುಖ್ಯ ಎಂದರು. ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿ ಸಂಸತ್‌ಗೆ ನೂತನವಾಗಿ ಆಯ್ಕೆಯಾದ ಸದಸ್ಯರಿಗೆ ಹಾಗೂ ಶಾಲೆಯ ವಿವಿಧ ಗುಂಪುಗಳ ನಾಯಕ ಉಪನಾಯಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಜ್ಞಾನದೀಪ ವಿದ್ಯಾಸಂಸ್ಥೆ ಅಧ್ಯಕ್ಷ ತಲವಾನೆ ಪ್ರಕಾಶ್, ಕಾರ್ಯದರ್ಶಿ ಬಿ.ಎಲ್ ನೀಲಕಂಠಮೂರ್ತಿ, ರೆಜಿ ಜೋಸೇಫ್, ವಾಣಿ ಕೃಷ್ಣಪ್ರಸಾದ್ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu