ಪ್ಲಾಸ್ಟಿಕ್ ಪರ್ಯಾಯವಾಗಿ ಜೈವಿಕ ಉತ್ಪನ್ನಗಳ ಬಳಕೆಯ ಜಾಗೃತಿ ಅವಶ್ಯಕ
ಶಿವಮೊಗ್ಗ | 19 ಜೂನ್ 2023 | ಡಿಜಿ ಮಲೆನಾಡು.ಕಾಂ
ಪ್ಲಾಸ್ಟಿಕ್‌ಗೆ ಪರ್ಯಾಯ ಉತ್ಪನ್ನ ಮಾರುಕಟ್ಟೆಯಲ್ಲಿ ಲಭ್ಯ ಆಗುವಂತೆ ಮಾಡಬೇಕಿರುವುದು ನಮ್ಮೆಲ್ಲರ ಕರ್ತವ್ಯ. ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಾವೆಲ್ಲರು ನಿಲ್ಲಿಸಬೇಕು. ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಒನ್ ನೆಸ್ ಸಲೂಷನ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಜೈವಿಕ ಕ್ಯಾರಿ ಬ್ಯಾಗ್ ಸೇರಿದಂತೆ ವಿವಿಧ ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದಿನ ನಿತ್ಯದ ಜೀವನದಲ್ಲಿ ಪ್ಲಾಸ್ಟಿಕ್ ಅನ್ನು ಸಾಮಾನ್ಯವಾಗಿ ಬಳಸುವುದನ್ನು ನಾವೆಲ್ಲರೂ ನೋಡಿದ್ದೇವೆ. ಜನಸಾಮಾನ್ಯರ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆ ಸಾಮಾನ್ಯವಾಗಿದೆ. ಪ್ಲಾಸ್ಟಿಕ್‌ಗೆ ಪರ್ಯಾಯ ಉತ್ಪನ್ನ ಸಿಗುತ್ತದೆ. ಮನೆ ಮನೆಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವ ಕೆಲಸ ಆಗಬೇಕು. ಇದರ ಜತೆಯಲ್ಲಿ ಪರ್ಯಾಯ ಉತ್ಪನ್ನಗಳ ಬಳಕೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಪ್ಲಾಸ್ಟಿಕ್ ಉತ್ಪನ್ನಗಳ ನಿಯಂತ್ರಣಕ್ಕೆ ಮಾರಾಟದಾರರಿಗೆ ದಂಡ ಹಾಕುವ ಬದಲಾಗಿ ಪ್ಲಾಸ್ಟಿಕ್ ಉತ್ಪಾದಕರಿಗೆ ಎಚ್ಚರಿಸುವ ಕೆಲಸ ಆಗಬೇಕು. ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಲು ಪರ್ಯಾಯ ಉತ್ಪನ್ನಗಳು ಲಭ್ಯವಿದೆ ಎನ್ನುವ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಿಸುವುದು ಪವಿತ್ರ ಕಾರ್ಯ. ಇಂತಹ ಶ್ರೇಷ್ಠ ಕಾರ್ಯ ನಡೆಸುತ್ತಿರುವ ಸಂಸ್ಥೆಯ ಕೆಲಸವು ಅಭಿನಂದನೀಯ. ಪರಿಸರ ಸಂರಕ್ಷಣೆಗೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ಪ್ಲಾಸ್ಟಿಕ್ ವಸ್ತುವಿಗೆ ಪರ್ಯಾಯವಾಗಿ ಮೆಕ್ಕೆಜೋಳದಿಂದ ಉತ್ಪನ್ನವನ್ನು ಸಿದ್ಧಪಡಿಸುತ್ತಿರುವುದು ಉತ್ತಮ ಕೆಲಸ. ಮೆಕ್ಕೆಜೋಳದಿಂದ ಸಿದ್ಧವಾಗುವ ಪರ್ಯಾಯ ಉತ್ಪನ್ನಗಳನ್ನು ಸಾರ್ವಜನಿಕರು ಬಳಸಬೇಕು. ಹೆಚ್ಚು ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ವಾಣಿಜ್ಯ ಸಂಘವು ನಿರಂತರವಾಗಿ ಸಹಕಾರ ನೀಡುತ್ತದೆ. ಪ್ಲಾಸ್ಟಿಕ್ ಪರ್ಯಾಯವಾದ ಜೈವಿಕ ಕ್ಯಾರಿ ಬ್ಯಾಗ್ ಹಾಗೂ ಉತ್ಪನ್ನಗಳನ್ನು ಉದ್ಯಮಿಗಳು ಹಾಗೂ ಸಾರ್ವಜನಿಕರು ಹೆಚ್ಚು ಬಳಸಬೇಕು ಎಂದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಸಂಘ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ್ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಒನ್ ನೆಸ್ ಸಂಸ್ಥೆಯ ಎ.ಎನ್.ಪ್ರಕಾಶ್, ರೋಹಿತ್ ವಿನಯ್, ವಿತರಕ ಗಣೇಶ್ ಎಂ.ಅಂಗಡಿ, ಸುಕುಮಾರ್, ಜೆ.ಆರ್.ವಾಸುದೇವ್, ಅಶ್ವತ್ಥ ನಾರಾಯಣ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu