ನೈತಿಕ ಶಿಕ್ಷಣ ಕಲಿಕೆಗೆ ಪ್ರಾಮುಖ್ಯತೆ ನೀಡಲು ಸಲಹೆ, ಎನ್‌ಇಎಸ್ ಹಬ್ಬದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ
ಶಿವಮೊಗ್ಗ | 22 ಜೂನ್ 2023 | ಡಿಜಿ ಮಲೆನಾಡು.ಕಾಂ
ನಮಗೆ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗಳು ಶೈಕ್ಷಣಿಕತೆಯ ಜೊತೆಗೆ ನೈತಿಕ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ ಅಭಿಪ್ರಾಯಪಟ್ಟರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ನಗರದ ಎನ್ಇಎಸ್ ಮೈದಾನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತ ಮಹೋತ್ಸವ ಸಮಾರೋಪ ಸಮಾರಂಭದ ‘ಎನ್.ಇ.ಎಸ್ ಹಬ್ಬ’ದಲ್ಲಿ ಮಾತನಾಡಿ, ವಿದ್ಯಾಸಂಸ್ಥೆಗಳಲ್ಲಿ ನೈತಿಕ ಶಿಕ್ಷಣ ನೀಡುವ ಕುರಿತು ಸರ್ಕಾರ ಹೆಚ್ಚು ಚಿಂತನೆ ನಡೆಸಬೇಕಿದೆ. ನೈತಿಕ ಮೌಲ್ಯಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಬೇಕು ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲೆಯಿಂದ ದೇಶಕ್ಕಾಗಿ ತನುಮನ ಧನ ನೀಡಿದ ಸೈನಿಕರು ಹೆಚ್ಚು. ಅಂತಹ ರಾಷ್ಟ್ರಪ್ರೇಮವೇ ಎನ್ಇಎಸ್ ಸಂಸ್ಥೆಯಂತಹ ಸಮೂಹ ಮೂಡಿಬರಲು ಕಾರಣ. ಲಕ್ಷಾಂತರ ವಿದ್ಯಾರ್ಥಿಗಳ ನಡುವೆ ಎನ್ಇಎಸ್ ವಿದ್ಯಾರ್ಥಿಗಳು ವಿಶೇಷವಾಗಿ ಗುರುತಿಸಿಕೊಳ್ಳಬಲ್ಲರು ಎಂದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣರಾವ್ ಮಾತನಾಡಿ, ಮಾನವೀಯ ಮೌಲ್ಯಗಳೊಂದಿಗೆ ಎನ್ಇಎಸ್ ಅಮೃತ ವರ್ಷ ಯಶಸ್ವಿಯಾಗಿ ಮೂಡಿದೆ. ಗ್ರಾಮೀಣದ ಭಾಗದಲ್ಲಿ ಶೈಕ್ಷಣಿಕ ಶ್ರೇಷ್ಟತೆ ನೀಡುವಲ್ಲಿ ಎನ್ಇಎಸ್ ಸಂಸ್ಥೆ ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಎನ್ಇಎಸ್ ನೂತನ ಕೈಪಿಡಿ ಹಾಗೂ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಎನ್ಇಎಸ್ ಉಪಾಧ್ಯಕ್ಷ ಸಿ.ಆರ್.ನಾಗರಾಜ, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎನ್.ಟಿ.ನಾರಾಯಣರಾವ್, ಎಂ.ಆರ್.ಸೀತಾಲಕ್ಷ್ಮೀ, ಎಂ.ಜಿ.ರಾಮಚಂದ್ರಮೂರ್ತಿ, ಡಿ.ಎಸ್.ಅರುಣ್, ಅನಂತದತ್ತಾ, ಮಧುರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu