ಭದ್ರಾ ಮೇಲ್ದಂಡೆ ಯೋಜನೆ ವರ್ಷದೊಳಗೆ ಪೂರ್ಣ ಸಾಧ್ಯತೆ, ಸಚಿವ ಡಿ.ಸುಧಾಕರ್ ಕಾಮಗಾರಿಗಳ ವೀಕ್ಷಣೆ
ಶಿವಮೊಗ್ಗ | 25 ಜೂನ್ 2023 | ಡಿಜಿ ಮಲೆನಾಡು.ಕಾಂ
ಭದ್ರಾ ಮೇಲ್ದಂಡೆ ಯೋಜನೆಗೆ ಗಾಜನೂರಿನ ತುಂಗಾ ಜಲಾಶಯದಿಂದ 17.4 ಟಿಎಂಸಿ ನೀರನ್ನು ಭದ್ರಾ ಜಲಾಶಯಕ್ಕೆ ಕೊಂಡೊಯ್ಯುವ ಯೋಜನೆಯು ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳ್ಳುವ ನೀರಿಕ್ಷೆ ಇದೆ ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಭದ್ರಾ ಮೇಲ್ದಂಡೆ ಯೋಜನೆಯ ನಾಲೆ ಕಾಮಗಾರಿಯ ಪ್ರಸ್ತುತ ಸ್ಥಿತಿಗತಿಯ ಕುರಿತು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಶೀಘ್ರಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ತಾಂತ್ರಿಕವಾಗಿ ಯಾವ ತೊಂದರೆಗಳೂ ಇಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಯೋಜನೆ ವೇಗಗೊಳಿಸಲಾಗುವುದು. ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದ್ದು, ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ತರಿಕೇರೆ ಶಾಸಕ ಜಿ.ಎಚ್.ಶ್ರೀನಿವಾಸ, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu